ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವ್ಯವಹಾರ; ತನಿಖೆಗೆ ಆಗ್ರಹ

Last Updated 16 ನವೆಂಬರ್ 2017, 10:32 IST
ಅಕ್ಷರ ಗಾತ್ರ

ಕಲಬುರ್ಗಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿಭಾಗೀಯ ಕಚೇರಿಯಲ್ಲಿ ಚೈತನ್ಯ ಸ್ವಯಂ ಉದ್ಯೋಗ ಹಾಗೂ ಸಾಂಪ್ರದಾಯಿಕ ಕುಶಲಕರ್ಮಿ ಯೋಜ ನೆಯಡಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾ ಯಿಸಿ ಜಯ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ ಕೂಗಿದರು.

2015–16, 2016–17ನೇ ಸಾಲಿನಲ್ಲಿ ಚೈತನ್ಯ ಸ್ವಯಂ ಉದ್ಯೋಗ ಹಾಗೂ ಸಾಂಪ್ರದಾಯಿಕ ಯೋಜನೆಯಡಿ ಕಲಬುರ್ಗಿ ವಿಭಾಗದ ಆರು ಜಿಲ್ಲೆಗಳ ಫಲಾನುಭವಿಗಳಿಗೆ ಸಾಲ ಬಿಡುಗಡೆ ಮಾಡಲಾಗಿದೆ.

ಆದರೆ ಆ ಪಟ್ಟಿಯಲ್ಲಿರುವ ಫಲಾನುಭವಿಗಳನ್ನು ಶಾಸಕರ ನೇತೃತ್ವದ ಆಯ್ಕೆ ಸಮಿತಿಗಳು ಆಯ್ಕೆ ಮಾಡಿಲ್ಲ. ಅಧಿಕಾರಿಗಳು ತಮಗೆ ಬೇಕಾದವರಿಗೆ ಸಾಲ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯದರ್ಶಿ ನವೀನ ಬತಲಿ, ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಅಲ್ಲಾ ಪಟೇಲ್, ಕಾರ್ಯದರ್ಶಿ ಉಮೇಶ ಬರಬಟ್ಟಿ, ವಿನೋದ ಪಾಟೀಲ, ಸಾಜಿದ್ ಅಹ್ಮದ್, ಶಿವು ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT