ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರ ಹಿತ ಬಯಸಿದ ಸರ್ಕಾರ

Last Updated 17 ನವೆಂಬರ್ 2017, 5:25 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಜನಪರ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತಂದಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನೇ ಬೆಂಬಲಿಸುವಂತೆ ಮುಖಂಡರು ಮನೆ ಮನೆಗೆ ಸರ್ಕಾರದ ಯೋಜನೆಗಳ ಕಿರು ಹೊತ್ತಿಗೆ ನೀಡಿ ಮನವಿ ಮಾಡಿದರು. ಸಮೀಪದ ಚನ್ನರಾಯಪಟ್ಟಣ ಹೋಬಳಿ ಬಾಲೇಪುರ ಗ್ರಾಮದಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಕೆ.ವೆಂಕಟಸ್ವಾಮಿ ಮಾತನಾಡಿದರು.

ಎಲ್ಲ ವರ್ಗದ ಜನರಿಗೂ ಅನುಕೂಲವಾಗುವ ಕಾರ್ಯಕ್ರಮಗಳನ್ನು ಸರ್ಕಾರ ನೀಡಿದೆ. ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಮಹತ್ವದ ಯೋಜನೆಗಳು ಜಾರಿಗೊಂಡಿದ್ದು, ಕುರಿತು ಪಕ್ಷದ ಕಾರ್ಯಕರ್ತರು ಮನೆಮನೆಗೆ ಮುಟ್ಟಿಸಬೇಕು. ಬೇರು ಮಟ್ಟದಿಂದಲೇ ಪಕ್ಷ ಗಟ್ಟಿಗೊಳಿಸಲು ಶ್ರಮಿಸಬೇಕು. ಬಡವರಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಅಭಿವೃದ್ಧಿ ಪರ ಕಾರ್ಯಕ್ರಮಗಳನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು.

ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷ ಲೊಕೇಶ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಮುನಿರಾಜು, ನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ, ಉಪಾಧ್ಯಕ್ಷ ನವೀನ್, ಸುರೇಶ್, ವೆಂಕಟಗಿರಿ

ರ‍್ಯಾಲಿ ನಡೆಸಿದರೂ ಪ್ರಯೋಜನ ಇಲ್ಲ
ಕಾಂಗ್ರೆಸ್ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಜನರು ಕೊಟ್ಟ ಅಧಿಕಾರ ದುರ್ಬಳಕೆ ಮಾಡಿಕೊಂಡು, ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡು ಜೈಲಿಗೆ ಪರೇಡ್ ನಡೆಸಿದ್ದ ಬಿಜೆಪಿ ನಾಯಕರು ಎಷ್ಟೇ ರ‍್ಯಾಲಿ ನಡೆಸಿದರೂ ಪ್ರಯೋಜನ ಇಲ್ಲ. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನೆ ಮತ್ತೆ ಆಯ್ಕೆ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT