ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಸಾಧಕರಿಗೆ ಆಳ್ವಾಸ್ ನುಡಿಸಿರಿ ಪುರಸ್ಕಾರ

Last Updated 17 ನವೆಂಬರ್ 2017, 5:35 IST
ಅಕ್ಷರ ಗಾತ್ರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿಸೆಂಬರ್‌ನಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಗಳ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಂಯ ಸಮಾರೋಪ ಸಮಾರಂಭದಲ್ಲಿ ನಾಡು ನುಡಿಗೆ ವಿಶೇಷ ಸೇವೆ ಸಲ್ಲಿಸಿದ 15 ಮಂದಿ ಸಾಧಕರನ್ನು 'ಆಳ್ವಾಸ್ ನುಡಿಸಿರಿ ಪ್ರಶಸ್ತಿ' ಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹25ಸಾವಿರ ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ ಎಂದು ಆಳ್ವಾಸ್ ಶಿಕ್ಷನ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಿಸೆಂಬರ್‌ 3ರಂದು ವಿದ್ಯಾಗಿರಿಯಲ್ಲಿ ನಡೆಯುವ ಆಳ್ವಾಸ್ ನುಡಿಸಿರಿ 2017ರ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿ ಪುರಸ್ಕೃತರು: ಬಳ್ಳಾರಿ ಪಾಂತ್ರ್ಯದ ಧರ್ಮಾಧ್ಯಕ್ಷರಾಗಿರುವ ಬಿಷಪ್ ಹೆನ್ರಿ ಡಿ'ಸೋಜ, ಸಾಮಾಜಿಕ ನ್ಯಾಯದ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ, ಸಂಶೋಧಕ ಧಾರವಾಡದ ಪ್ರೊ.ತೇಜಸ್ವಿ ಕಟ್ಟೀಮನಿ, ವಿಮರ್ಶಕ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಮಹಿಳಾಪರ ಹೋರಾಟಗಾರ್ತಿ ಡಾ.ವಿಜಯಾದಬ್ಬೆ, ತುಮಕೂರಿನ ಕವಿ ಪ್ರೊ. ಕೆ.ಬಿ.ಸಿದ್ಧಯ್ಯ, ಕಾದಂಬರಿಕಾರ ಮೈಸೂರು ಹೆಬ್ಬಾಳದ ಪ್ರೊ.ಜಿ.ಎಚ್ ಹನ್ನೆರಡುಮಠ, ಮಂಗಳೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಸುರೇಂದ್ರರಾವ್, ಯಕ್ಷಗಾನ ವಿಮರ್ಶಕ ಕಾರ್ಕಳ ಮಾಳದ ಡಾ. ಎಂ. ಪ್ರಭಾಕರ ಜೋಶಿ, ತೂಗು ಸೇತುವೆಗಳ ಸರದಾರ ಖ್ಯಾತಿಯ ಗಿರೀಶ್ ಭಾರದ್ವಾಜ್, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಸುಗಮ ಸಂಗೀತ ಕ್ಷೇತ್ರದ ಕಲಾವಿದೆ ರತ್ನಮಾಲಾ ಪ್ರಕಾಶ್, ನಾಟಕಕಾರ ಮುಂಬಯಿ ಕನ್ನಡಿಗ ಡಾ.ತೋನ್ಸೆ ವಿಜಯ್‌ಕುಮಾರ್‌ಶೆಟ್ಟಿ ಮತ್ತು ರಥಶಿಲ್ಪಿ ಕೋಟೇಶ್ವರದ ಲಕ್ಷ್ಮೀನಾರಾಯಣ ಆಚಾರ್ಯ ಇವರು 2017ರ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT