ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಸೇರ್ಪಡೆ ನ.30 ಕೊನೆ ದಿನ

Last Updated 17 ನವೆಂಬರ್ 2017, 6:48 IST
ಅಕ್ಷರ ಗಾತ್ರ

ವಿಜಯಪುರ: ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡೆ, ಮರಣ ಹೊಂದಿದ ವ್ಯಕ್ತಿಗಳ ಹೆಸರನ್ನು ತೆಗೆದು ಹಾಕಲು ಇದೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 30 ರಂದು ಪ್ರಕಟಿಸಲಾಗಿದ್ದು, 30 ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕಲು ಅವಕಾಶವಿದ್ದು, ಸಂಬಂಧಪಟ್ಟ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

15 ರಿಂದ 30 ರವರೆಗೆ ವಿಶೇಷ (ಸ್ಪೇಶಲ್ ಡ್ರೈವ್) ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಈ ಅವಧಿಯಲ್ಲಿ ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಚುನಾವಣಾ ಆಯೋಗದ ನಿಗದಿತ ನಮೂನೆ 1 ರಿಂದ 8 ರಲ್ಲಿ ಮಾಹಿತಿಯನ್ನು ತಯಾರಿಸಲಿದ್ದಾರೆ.

ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ಅವಶ್ಯವಿದ್ದಲ್ಲಿ ಲೆಟರ್ ಹೆಡ್‌ನಲ್ಲಿ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಗಳ ಸಹಿಯೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗೆ ಅರ್ಜಿ ಸಲ್ಲಿಸಿದ್ದಲ್ಲಿ 2095 ಮತಗಟ್ಟೆಗಳ ಒಂದು ಮತದಾರರ ಪಟ್ಟಿಯನ್ನು ಉಚಿತವಾಗಿ ಪೂರೈಸಲಾಗುವುದು. ಇನ್ನೂ ಹೆಚ್ಚಿನ ಪ್ರತಿಗಳ ಅವಶ್ಯವಿದ್ದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿ ಪುಟಕ್ಕೆ ₨2 ರಂತೆ ಪಾವತಿ ಮಾಡಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT