ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

Last Updated 17 ನವೆಂಬರ್ 2017, 6:57 IST
ಅಕ್ಷರ ಗಾತ್ರ

ಸುರಪುರ: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ (ಕೆಪಿಎಂಇ) ವಿರೋಧಿಸಿ ನಗರದ ಎಲ್ಲಾ ಖಾಸಗಿ ವೈದ್ಯರು ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದ ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ.

ರೋಗಿಗಳು ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿರುವುದರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ವೈದ್ಯರಿಲ್ಲದ ಕಾರಣ ಅಲ್ಲಿಯೂ ರೋಗಿಗಳು ಪರಿತಪಿಸುವಂತಾಗಿದೆ. ಖಾಸಗಿ ವೈದ್ಯರ ಮುಷ್ಕರಕ್ಕೆ ರಕ್ತ ಪರೀಕ್ಷಾ ಬೆಂಬಲ ನೀಡಿವೆ. ಆದರೆ, ಔಷಧಿ ಅಂಗಡಿಗಳು ತೆರೆದಿರು ವುದರಿಂದ ಅನುಕೂಲವಾಗಿದೆ.

‘ಕೆಪಿಎಂಇ ಮಸೂದೆ ಖಾಸಗಿ ವೈದ್ಯರನ್ನು ಹತ್ತಿಕ್ಕುವ ಹುನ್ನಾರವಾಗಿದೆ. ಈ ಮಸೂದೆ ಜಾರಿಗೆ ಬಂದಲ್ಲಿ ಖಾಸಗಿ ವೈದ್ಯರು ತಮ್ಮ ವೃತ್ತಿಯನ್ನು ನಡೆಸಲು ಕಠಿಣವಾಗುತ್ತದೆ. ಒಂದು ವೇಳೆ ಸರ್ಕಾರ ಮಸೂದೆ ಜಾರಿಗೊಳಿಸಿದರೆ ತಮ್ಮ ವೃತ್ತಿಯನ್ನೆ ಬಿಡುವ ವಿಚಾರವನ್ನು ಹಲವು ವೈದ್ಯರು ಮಾಡುತ್ತಿದ್ದಾರೆ’ ಎಂದು ಖಾಸಗಿ ವೈದ್ಯರೊಬ್ಬರು ತಿಳಿಸಿದರು.

‘ಸರ್ಕಾರ ತನ್ನ ಪಟ್ಟು ಬಿಡುತ್ತಿಲ್ಲ. ಅತ್ತ ಖಾಸಗಿ ವೈದ್ಯರು ಮುಷ್ಕರ ನಿಲ್ಲಿಸುವ ಲಕ್ಷಣ ಕಾಣುತ್ತಿಲ್ಲ. ಇದರ ನಡುವೆ ರೋಗಿಗಳು ಪರದಾಡುವಂತಾಗಿದೆ. ಸಾಮಾನ್ಯ ಜನರಿಗೆ ಆಗುವ ತೊಂದರೆ ತಪ್ಪಿಸಲು ಈ ಸಮಸ್ಯೆಗೆ ಶೀಘ್ರ ಪರಿಹಾರ ಹುಡುಕಬೇಕು’ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಭಕ್ರಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT