ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರೈತ ಮೋರ್ಚಾದಿಂದ ರಸ್ತೆ ತಡೆ

Last Updated 17 ನವೆಂಬರ್ 2017, 10:03 IST
ಅಕ್ಷರ ಗಾತ್ರ

ಮುಂಡರಗಿ: ರೈತರ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ತಾಲ್ಲೂಕು ಘಟಕದ ರೈತ ಮೋರ್ಚಾ ಕಾರ್ಯಕರ್ತರು ಮುಂಡರಗಿ ತಹಶೀಲ್ದಾರ್ ಕಚೇರಿ ಎದುರು ನಡೆಸುತ್ತಿದ್ದ ಪ್ರತಿಭಟನೆಯನ್ನು ಗುರುವಾರ ಕೊನೆಗೊಂಡಿದೆ. ಉಪ ವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮನವೊಲಿಸಿದ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.

ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಶಿವನಗೌಡ್ರ ಗೌಡ್ರ, ‘ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರತಿಭಟನೆ ನಡೆಸುತ್ತಿದ್ದರೂ, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ. ಬೆಳೆ ನಷ್ಟದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಜನಪ್ರತಿನಿಧಿಗಳು ರೈತರ ಬದುಕಿನಿ ಜತೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಸ್ಥಳೀಯ ಇಲಾಖೆಗಳ ಅಧಿಕಾರಿಗಳು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸದೇ ಕಾಲ ಹರಣ ಮಾಡುತ್ತಿದ್ದಾರೆ. ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಕುರಿತು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದೇವಪ್ಪ ಇಟಗಿ, ನಾಗರಾಜ ಮುರುಡಿ, ಗಣೇಶ ಹಾತಲಗೇರಿ, ನೀಲಪ್ಪ ಚಿಕ್ಕಣ್ಣವರ, ರುದ್ರಪ್ಪ ಲದ್ದಿ, ಹನುಮಂತಗೌಡ ಗೌಡ್ರ, ದುಬ್ಬಣ್ಣ ಬಡಿಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT