ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಖಾಸಗಿ ಆಸ್ಪತ್ರೆ ಪುನರಾರಂಭ

Last Updated 18 ನವೆಂಬರ್ 2017, 6:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ(ಕೆಪಿಎಂಇ) ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರ ಶುಕ್ರವಾರ ಅಂತ್ಯಗೊಂಡಿದ್ದು, ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಎಲ್ಲ ಖಾಸಗಿ ಆಸ್ಪತ್ರೆ, ಕ್ಲಿನಿಕ್, ಪ್ರಯೋಗಾಲಯಗಳಲ್ಲಿ ವೈದ್ಯಕೀಯ ಸೇವೆ ಎಂದಿನಂತೆ ಸೇವೆ ಪುನರಾಂಭವಾಗಲಿದೆ.

ಕೆಪಿಎಂಇ ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕ ಹಮ್ಮಿಕೊಂಡಿದ್ದ ಅನಿರ್ದಿಷ್ಟ ಧರಣಿಗೆ ಭಾಗವಿಹಿಸಲು ಬೆಳಗಾವಿಯ ಸುವರ್ಣಸೌಧಕ್ಕೆ ತೆರಳಿದ್ದರು. ಇದರಿಂದಾಗಿ ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಬೇಕಿತ್ತು. ಆದರೆ ಸಂಜೆ ವೇಳೆಗೆ ಜನರು ಖಾಸಗಿ ಆಸ್ಪತ್ರೆಯತ್ತಾ ಮುಖ ಮಾಡಿದ ದೃಶ್ಯ ಕಂಡು ಬಂತು.

‘ಜಿಲ್ಲಾಸ್ಪತ್ರೆಯಲ್ಲಿ ಗುರುವಾರ 54 ಒಳರೋಗಿಗಳು, 915 ಹೊರ ರೋಗಿಗಳು, 3 ಹೆರಿಗೆ, 1 ಜನರಲ್‌ ಸರ್ಜರಿ ಆಗಿವೆ. ಶುಕ್ರವಾರ 61ಒಳರೋಗಿಗಳು, 776 ಹೊರರೋಗಿಗಳು, 6 ಹೆರಿಗೆ , 2 ಜನರಲ್‌ ಸರ್ಜರಿ ಆಗಿವೆ. ಒಳರೋಗಿಗಳ ಸಂಖ್ಯೆ ಗುರುವಾರಕ್ಕಿಂತ ಶುಕ್ರವಾರ ಹೊರರೋಗಿಗಳ ಸಂಖ್ಯೆ ಕಡಿಮೆಯಾಗಿದೆ’ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯ ಕುಮಾರ್‌ ತಿಳಿಸಿದರು.

‘ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ 34 ಜನ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಭಾಗದಲ್ಲಿ ಚಿಕಿತ್ಸೆ ಸಿಗದೇ ಆಂಧ್ರಪ್ರದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ, ಅವೆಲ್ಲಾ ಬರೀ ಊಹಾಪೋಹಗಳು ಅಷ್ಟೇ’ ಎಂದರು.

‘ಕೆಪಿಎಂಇ ತಿದ್ದುಪಡಿ ಮಸೂದೆಯಲ್ಲಿನ ಕೆಲವು ಅಂಶಗಳಿಗೆ ಮಾರ್ಪಾಡು ಮಾಡಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಸಭೆ ನಡೆಸಿ ಆಶ್ವಾಸನೆ ನೀಡಿದ ನಂತರ ಸಂಜೆ ಹೊತ್ತಿಗೆ ಕೆಲ ಕ್ಲಿನಿಕ್ ಹಾಗೂ ನರ್ಸಿಂಗ್ ಹೋಂಗಳು ಸೇವೆ ನೀಡಲು ಸೂಚಿಸಲಾಗಿದೆ.

ಶನಿವಾರದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಚಿಕಿತ್ಸೆ ನೀಡಲಾಗುವುದು’ ಎಂದು ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಾಚಲಪತಿ ಪ್ರಜಾವಾಣಿಗೆ ತಿಳಿಸಿದರು.

* * 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT