ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉಡಿ ತುಂಬುವುದು ದೇಸಿ ಸಂಸ್ಕೃತಿ’

Last Updated 18 ನವೆಂಬರ್ 2017, 8:20 IST
ಅಕ್ಷರ ಗಾತ್ರ

ಬ್ಯಾಡಗಿ: ‘ಮಹಿಳೆಯವರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ. ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ ಹೇಳಿದರು.

ಪಟ್ಟಣದ ನೆಹರೂ ನಗರದ ದಾನಮ್ಮದೇವಿಯ 6ನೇ ವರ್ಷದ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ರಾತ್ರಿ ನಡೆದ 6,001 ಮಹಿಳೆಯವರಿಗೆ ಉಡಿ ತುಂಬುವ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದರು. ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ‘ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ನೈತಿಕತೆ ಮೈಗೂಡಿಸಿಕೊಂಡರೆ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.

ಉಡಿ ತುಂಬುವ ಕಾರ್ಯಕ್ರಮದಲ್ಲಿ, ತಾಲ್ಲೂಕಿನ ವಿವಿಧ ಗ್ರಾಮಗಳ ಮಹಿಳೆಯರು ಪಾಲ್ಗೊಂಡಿದ್ದರು. ಪಟ್ಟಣದ ಹಿರಿಯ ನಾಗರಿಕರನ್ನೂ ಇದೇ ವೇಳೆ ಗೌರವಿಸಲಾಯಿತು.

ಬಿಜೆಪಿ ಮುಖಂಡ ಸಿ.ಎಂ.ಉದಾಸಿ ಅವರ ಪತ್ನಿ ನೀಲಮ್ಮ ಉದಾಸಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯೆ ವನಿತಾ ಗುತ್ತಲ, ವರ್ತಕ ಬಾಬಣ್ಣ ಮೇಲಗಿರಿ, ಪ್ರವಚನಕಾರ ಸಂಗಮೇಶ್ವರ ದೇವರು, ಶರಣಕುಮಾರ ಯಾಳಗಿ, ದೇವರಾಜ ಕೊಡೆಕಲ್‌, ದಾನೇಶ್ವರಿ ಸೇವಾ ಸಮಿತಿ ಅಧ್ಯಕ್ಷೆ ಮಹೇಶ್ವರಿ ಪಸಾರದ ಇದ್ದರು.

* * 

ತಿಯೊಬ್ಬರು ತಮ್ಮ ಜೀವನದಲ್ಲಿ ನೈತಿಕತೆ ಮೈಗೂಡಿಸಿಕೊಂಡರೆ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ
ಸದಾಶಿವ ಸ್ವಾಮೀಜಿ
ಹಾವೇರಿ ಹುಕ್ಕೇರಿಮಠ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT