ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ನಡುಗಿದ ಭೂಮಿ

Last Updated 18 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಜೈಪುರ/ಬಿಜೀಂಗ್‌: ರಾಜಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ 4.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಜೋಧಪುರದಲ್ಲಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲ ಸೆಕೆಂಡ್‌ಗಳವರೆಗೆ ಭೂಮಿ ಕಂಪಿಸಿದ್ದು, ಜನ ಆತಂಕಕ್ಕೆ ಒಳಗಾದರು. ಪ್ರಾಣಹಾನಿಯಾದ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಬೆಟ್‌ನ ನಿಯಿಂಗ್ಚಿ ನಗರ ಹಾಗೂ ಸುತ್ತಮುತ್ತ ಪ್ರದೇಶ ಮತ್ತು ಅರುಣಾಚಲ ಪ್ರದೇಶದ ಗಡಿಭಾಗಗಳಲ್ಲೂ  ಪ್ರಬಲ ಭೂಕಂಪ ಸಂಭವಿಸಿದೆ.

ರಿಕ್ಟರ್‌ ಮಾಪನದಲ್ಲಿ ಭೂಕಂಪದ ತೀವ್ರತೆ 6.9 ರಷ್ಟು ದಾಖಲಾಗಿದೆ. ಭೂಕಂಪನದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ, ನಯಿಂಗ್ಚಿ ಪ್ರದೇಶದ ಅನೇಕ ಹಳ್ಳಿಗಳಲ್ಲಿ ವಿದ್ಯುತ್‌ ಸ್ಥಗಿತಗೊಂಡಿದೆ. ಆಸ್ತಿಪಾಸ್ತಿಗಳು ಮತ್ತು ರಸ್ತೆಗಳು ಹಾನಿಗೊಂಡಿವೆ.

ನಿಯಿಂಗ್ಚಿಯಲ್ಲಿ ಭೂಕಂಪದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT