ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಜೆ.ಪುಟ್ಟಸ್ವಾಮಿ ಅಸ್ವಸ್ಥ ಆಸ್ಪತ್ರೆಗೆ ದಾಖಲು

Last Updated 18 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎದೆನೋವಿನಿಂದ ಬಳಲುತ್ತಿರುವ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ಅವರನ್ನು ರಾಜಾಜಿನಗರದ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಅವರಿಗೆ ಇದೇ 16ರಂದು ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಅಲ್ಲಿನ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿಗೆ ಕರೆತರಲಾಗಿದೆ.

‘ವೈದ್ಯರು ಎಲ್ಲ ಪರೀಕ್ಷೆಗಳನ್ನು ಮಾಡಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಆದರೂ ಎರಡು ದಿನ ಆಸ್ಪತ್ರೆಯಲ್ಲಿ ಇರುವಂತೆ ಸೂಚಿಸಿದ್ದಾರೆ’ ಎಂದು ಪುಟ್ಟಸ್ವಾಮಿ ಅವರ ಪುತ್ರ ತನ್ಮಯ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT