ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಪೂಜಾರಿ ಒತ್ತಾಯ

Last Updated 19 ನವೆಂಬರ್ 2017, 4:22 IST
ಅಕ್ಷರ ಗಾತ್ರ

ತೆಲಸಂಗ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ವಿರೋಧಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್‌ದಿಂದ ವಜಾಗೊಳಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಮಾದಿಗ ಸಮುದಾಯದವರು ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ’ ಎಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಪೂಜಾರಿ ಹೇಳಿದರು.

ಗ್ರಾಮದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ಈಗಾಗಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಲಾಗಿದೆ’ ಎಂದರು.

ಶಾಸಕ ಪಿ.ರಾಜೀವ ಅವರು ಕೂಡ ಈ ವರದಿ ಜಾರಿಗೆ ವಿರೋಧಿಸಿ ಮನಬಂತೆ ಮಾತನಾಡಿದ್ದಾರೆ. ಅವರಿಗೆ ಈ ಸಾರಿ ಬಿಜೆಪಿ ಟಿಕೆಟ್‌ ಕೊಡಬಾರದು. ಅವರಿಗೆ ಟಿಕೆಟ್ ನೀಡಿದರೆ ಬಿಜೆಪಿಗೆ ಮಾದಿಗರು ಪಾಠ ಕಲಿಸುತ್ತಾರೆ’ ಎಂದರು.

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ನ. 20 (ಸೋಮವಾರ) ಕೂಡಲಸಂಗಮದಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬೆಳಗಾವಿ: ‘ರೈತರು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು, ಆತ್ಮಹತ್ಯೆ ಮಾಡಿ ಕೊಳ್ಳದೆ ಅವಕಾಶಗಳನ್ನು ಹುಡುಕಿಕೊಂಡು ಜೀವನ ರೂಪಿಸಿಕೊಳ್ಳಬೇಕು’ ಎಂದು ಶಾಸಕ ಸಂಜಯ ಪಾಟೀಲ ಸಲಹೆ ನೀಡಿದರು.

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ತಾಲ್ಲೂಕಿನ ಚಂದನ ಹೊಸೂರ ಗ್ರಾಮದ ಸಿದ್ದಪ್ಪ ಬಾಬು ಪಾಟೀಲ ಅವರ ಪತ್ನಿ ಮಲ್ಲವ್ವ ಪಾಟೀಲ ಅವರಿಗೆ ಕೃಷಿ ಇಲಾಖೆಯಿಂದ ಮಂಜೂರಾದ ₹ 5 ಲಕ್ಷದ ಚೆಕ್‌ ವಿತರಿಸಿ ಅವರು ಮಾತನಾಡಿದರು.

ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಸಿದ್ದಪ್ಪ ಪಾಟೀಲ ಅವರ ಕುಟುಂಬಕ್ಕೆ ಕೃಷಿ ಇಲಾಖೆ, ಆರೋಗ್ಯ, ಶಿಕ್ಷಣ ಹಾಗೂ ಇತರ ಇಲಾಖೆಯಿಂದ ಸಿಗುವ ಸರ್ಕಾರಿ ಸವಲತ್ತುಗಳನ್ನು ನೀಡುವುದಾಗಿ ಭರವಸೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಜಿ. ಬಿ. ಕಲ್ಯಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT