ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ‘ನಮ್ಮ ಊರು ನಮ್ಮ ನಾಡು’ ಯೋಜನೆ

Last Updated 19 ನವೆಂಬರ್ 2017, 4:56 IST
ಅಕ್ಷರ ಗಾತ್ರ

ನರಸಿಂಹರಾಜಪುರ: ವಿದೇಶದಲ್ಲಿ ನೆಲೆಸಿರುವ ಹೊರನಾಡ ಕನ್ನಡಗಿರ ಮೂಲಕ ಗ್ರಾಮದ ಸರ್ಕಾರಿ ಶಾಲೆ, ದೇವಸ್ಥಾನ, ಸಮುದಾಯ ಭವನ ಅಭಿವೃದ್ಧಿಗೆ ‘ನಮ್ಮ ಊರು ನಮ್ಮ ನಾಡು’ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ರಾಜ್ಯ ಅನಿವಾಸಿ ಭಾರತೀಯ ನಿಗಮದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.

ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದಿರಾಗಾಂಧಿ ಜನ್ಮ ಶತಮಾನೋತ್ಸವದ ಅಂಗವಾಗಿ ಕೃಷ್ಣ ಫೌಂಡೇಶನ್ ನಿಂದ ಆಯೋಜಿಸಿದ್ದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಹೊರ ದೇಶದಲ್ಲಿರುವ ಕನ್ನಡಿಗರಿಂದ ಅನುದಾನ ತಂದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಕ್ಷೇತ್ರದ ಮೂರು ತಾಲ್ಲೂಕಿನಲ್ಲೂ ಕೃಷ್ಣ ಫೌಂಡೇಶನ್‌ನಿಂದ 10 ಶಿಕ್ಷಕರಿಗೆ ಸನ್ಮಾನ ಮಾಡಲಾಗಿದೆ. ತಾವು ಹಿಂದೆ ಇದೇ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಫೌಂಡೇಶನ್‌ನ ಕಾರ್ಯಕ್ರಮಗಳನ್ನು ಇಲ್ಲಿಂದಲೇ ಪ್ರಾರಂಭಿಸಲಾಗಿದೆ. ತಾಲ್ಲೂಕಿನ ಎನ್.ಆರ್.ಪುರ, ಗಡಿಗೇಶ್ವರ, ಬೆಳ್ಳೂರು ಶಾಲೆಗೆ ಸಮುದಾಯ ಭವನ ನಿರ್ಮಿಸಲಾಗಿದೆ. ಸೌದಿ ಅರೇಬಿಯಾದ ಸಂಸ್ಥೆಯೊಂದು ಕ್ಷೇತ್ರದ ವ್ಯಾಪ್ತಿಯ ಕೆಲವು ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಿ ಕೊಡಲು ಮುಂದೆ ಬಂದಿದೆ’ ಎಂದರು.

ಮಾಜಿ ಸಚಿವ ಬೇಗಾನೆ ರಾಮಯ್ಯ ಮಾತನಾಡಿ, ‘ತಮ್ಮ ಮಗಳು ಆರತಿಕೃಷ್ಣ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಸ್ಥಾನ ಪಡೆದಿದ್ದಾರೆ. ತಾವು ವಕೀಲರ ವೃತ್ತಿಯನ್ನು ಪ್ರಾರಂಭಿಸಿದ್ದು, ಶಾಸಕರಾಗಿ ಆಯ್ಕೆಯಾಗಿದ್ದು ಎನ್.ಆರ್.ಪುರದಿಂದ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಭದ್ರೇಗೌಡ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಪ್ಪ, ತಿಮ್ಮೇಶ್ ಇದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರಾದ ವಿಶಾಲ, ಗೀತಾ,ನಟರಾಜ್, ಕಳಸಪ್ಪ, ಶ್ರೀನಿವಾಸ್, ಪ್ರೌಢಶಾಲಾ ಶಿಕ್ಷಕರಾದ ಪ್ರಕಾಶ್, ಜವರಯ್ಯ, ವೆಂಕಟೇಶ್, ಗಂಗಾಧರಪ್ಪ ಅವರನ್ನು ಅಭಿನಂದಿಸಲಾಯಿತು.

* * 

ಕೃಷ್ಣ ಫೌಂಡೇಶನ್‌ನಿಂದ ಎನ್.ಆರ್.ಪುರ, ಕೊಪ್ಪ, ಶೃಂಗೇರಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಕ್ರಮಕೈಗೊಳ್ಳಲಾಗಿದೆ.
ಡಾ.ಆರತಿಕೃಷ್ಣ
ರಾಜ್ಯ ಅನಿವಾಸಿ ಭಾರತೀಯ ನಿಗಮದ ಉಪಾಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT