ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಐದೇ ತಿಂಗಳಲ್ಲಿ ಅಧಿಕಾರಕ್ಕೆ ಬರ್ತೀವಿ, ಪಾಠ ಕಲಿಸುತ್ತೇವೆ’

Last Updated 19 ನವೆಂಬರ್ 2017, 5:16 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಐದೇ ತಿಂಗಳಲ್ಲಿ ನಮ್ಮ ಸರ್ಕಾರ ಬರುತ್ತದೆ. ನಮ್ಮ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ಮಾತ್ರವಲ್ಲ, ನಾವು ಡೈರಿ ಮೇಂಟೇನ್ ಮಾಡಿದ್ದೀವಿ. ಯಾರು ಕಾಂಗ್ರೆಸ್ ಚೇಲಾಗಳಂತೆ ವರ್ತಿಸುತ್ತಿದ್ದಾರೆಂದು ಗೊತ್ತಿದೆ...’

ಶನಿವಾರ ಜಿಲ್ಲಾ ಬಿಜೆಪಿ ಘಟಕ ಆಯೋಜಿಸಿದ್ದ ‘ಜನಜಾಗೃತಿ ಜಾಥಾ’ದಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಮತ್ತು ಪರಿಷತ್‌ ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಸ್ಥಳೀಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಪರಿ ಇದು.

ಟಿಪ್ಪು ಜಯಂತಿ ವೇಳೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ 94 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ‘ಅದನ್ನು ವಿರೋಧಿಸುವುದಕ್ಕಾಗಿಯೇ ಈ ಸಭೆ ಮಾಡುತ್ತಿದ್ದೇವೆ’ ಎಂದರು.

‘ಪಾಪದ ಕೊಡ ತುಂಬಿದ ಮೇಲೆ ಯಾರೂ ರಕ್ಷಣೆಗೆ ಬರುವುದಿಲ್ಲ. ಹಾಗೆಯೇ ದೌರ್ಜನ್ಯ ಹೆಚ್ಚು ಕಾಲ ಇರುವುದಿಲ್ಲ. ಆ ರೀತಿ ಹೆದರಿಸಬಹುದು ಎಂಬುದು ತಪ್ಪು ಕಲ್ಪನೆ. ನಮ್ಮನ್ನು ಅತಿಯಾಗಿ ಕೆಣಕಬೇಡಿ’ ಎಂದು ಅವರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT