ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Last Updated 19 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಪದವಿ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಬಿ.ಎಸ್ಸಿ ಭೌತವಿಜ್ಞಾನ, ಜೀವವಿಜ್ಞಾನ ಮತ್ತು ಬಿ.ಎ ಅರ್ಥಶಾಸ್ತ್ರ, ಮಾನವಿಕ ವಿಷಯಕ್ಕೆ ಪ್ರವೇಶ ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.azimpremjiuniversity.edu.in/ug ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ವೈಯಕ್ತಿಕ ಸಂದರ್ಶನ ನಡೆಸಿ ಅಂತಿಮ ಆಯ್ಕೆ ಮಾಡಲಾಗುತ್ತದೆ.

ಎರಡು ರೀತಿಯ ಪ್ರವೇಶ ನಡೆಯಲಿದ್ದು, ಆರಂಭದ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್‌ 5 ಕೊನೇ ದಿನ. ಅದೇ ತಿಂಗಳು 17ರಂದು ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಸೇರಿ ಕೆಲ ನಗರಗಳಲ್ಲಿ ನಡೆಸಲಾಗುತ್ತದೆ. ಸಂದರ್ಶನ ಮತ್ತು ನೋಂದಣಿಯು 2018ರ ಜನವರಿಯಲ್ಲಿ ನಡೆಯುತ್ತದೆ.

ಸಾಮಾನ್ಯ ಪ್ರವೇಶ ಪ್ರಕ್ರಿಯೆಯು 2018ರ ಏಪ್ರಿಲ್‌ನಲ್ಲಿ ನಡೆಯಲಿದೆ. ಪ್ರವೇಶ ಪರೀಕ್ಷೆ ಮತ್ತು ಸಂದರ್ಶನವು ಮೇನಲ್ಲಿ ನಡೆಯುತ್ತದೆ.

ಸಂಪರ್ಕಕ್ಕೆ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಪಿಕ್ಸೆಲ್ ಪಾರ್ಕ್, ಬಿ ಬ್ಲಾಕ್, ಪಿಇಎಸ್ ಕ್ಯಾಂಪಸ್, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ರಸ್ತೆ. ಸಹಾಯವಾಣಿ: 1800 843 2001. ಇ-ಮೇಲ್: ugadmissions@apu.edu.in.

ಉದ್ಯಮಶೀಲತೆ ವಿಷಯದಲ್ಲಿ ಪಿಎಚ್‌.ಡಿ
ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಬೆಂಗಳೂರು (ಐಐಎಂಬಿ) ಉದ್ಯಮಶೀಲತೆ ವಿಷಯದಲ್ಲಿ ಪಿಎಚ್‌.ಡಿ ಪದವಿ ನೀಡಲು ಮುಂದಾಗಿದೆ. ಎಂಬಿಎ ಪದವೀಧರರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಉದ್ಯಮಶೀಲತೆ ಬಗ್ಗೆ ಸಂಶೋಧನೆ ನಡೆಸುವ ಹಾಗೂ ನವೋದ್ಯಮ ಸ್ಥಾಪಿಸುವ ಆಸಕ್ತರು ಈ ವಿಷಯದಲ್ಲಿ ಪಿಎಚ್‌.ಡಿ ಪದವಿ ಪಡೆಯಬಹುದು.

ಮಾಹಿತಿಗೆ iimb.ac.in/programmes/doctoral/fpm ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT