ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ ಇಲ್ಲ ಮಾಗಿಯ ಚಳಿ ಅನುಭವ

Last Updated 19 ನವೆಂಬರ್ 2017, 20:04 IST
ಅಕ್ಷರ ಗಾತ್ರ

ಬೆಂಗಳೂರು: ನವೆಂಬರ್‌ ಮುಗಿಯುತ್ತಾ ಬಂದರೂ ಮಾಗಿಯ ಚಳಿ ಮಾತ್ರ ಪ್ರಾರಂಭವಾಗಿಲ್ಲ. ಅಲ್ಲದೆ, ಸಾಮಾನ್ಯ ಉಷ್ಣಾಂಶಕ್ಕಿಂತ ಹೆಚ್ಚು ತಾಪಮಾನದ ಅನುಭವವಾಗುತ್ತಿದೆ.

ಮೋಡಕವಿದ ವಾತಾವರಣ ಇರುವುದರಿಂದ ಚಳಿಗಾಲ ತಡವಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ಹಂಗಾಮಿ ನಿರ್ದೇಶಕ ಸುಂದರ್‌ ಎಂ. ಮೇತ್ರಿ, ‘ಸಂಜೆ ಸಮಯದಲ್ಲಿ ಮೋಡ ಕವಿಯುತ್ತಿರುವುದರಿಂದ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಉತ್ತರದಿಂದ ಜೋರಾಗಿ ಗಾಳಿ ಸಹ ಬೀಸುತ್ತಿದೆ. ಒಂದು ವೇಳೆ ಮೋಡಗಳು ರಚನೆಯಾಗದಿದ್ದರೇ, ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿತ್ತು’ ಎಂದು ವಿವರಿಸಿದರು.

ಭಾನುವಾರ ಬೆಳಿಗ್ಗೆ 8.30ಕ್ಕೆ ನಗರದಲ್ಲಿ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ (ಸಾಮಾನ್ಯಕ್ಕಿಂತ ಮೂರು ಡಿಗ್ರಿ ಅಧಿಕ ತಾಪಮಾನ) ಹಾಗೂ ಸಂಜೆ 5.30ಕ್ಕೆ ಕನಿಷ್ಠ ತಾಪಮಾನ 20.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

‘ಇದೇ ವಾತಾವರಣ ಇನ್ನೂ ಕೆಲ ದಿನಗಳು ಮುಂದುವರಿದರೆ ಚಳಿಗಾಲದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಚಳಿಗಾಲದ ಸಮಯದಲ್ಲಿ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ಮುಂದಿನ ಎರಡು, ಮೂರು ದಿನಗಳಲ್ಲಿ ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT