ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ಬಳಸಿ ರೋಗ ದೂರ ಮಾಡಿ

Last Updated 20 ನವೆಂಬರ್ 2017, 10:09 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪ್ರತಿಯೊಂದು ಮನೆಗಳಲ್ಲಿಯೂ ಶೌಚಾಲಯ ನಿರ್ಮಿಸಿಕೊಂಡು ಅದನ್ನು ಸರಿಯಾಗಿ ಬಳಸಬೇಕು ಎಂದು ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಕೆ.ರಂಗನಾಥ ಹೇಳಿದರು.

ವಿಶ್ವ ಶೌಚಾಲಯ ದಿನದ ಪ್ರಯುಕ್ತ ಮಂಗಳವಾರಪೇಟೆ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ನಿರ್ಮಾಣ ಮತ್ತು ಬಳಕೆಯ ಮಹತ್ವದ ಬಗ್ಗೆ ಶನಿವಾರ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇವಲ ಶೌಚಾಲಯ ನಿರ್ಮಿಸುವುದು ಮುಖ್ಯವಲ್ಲ. ಅದನ್ನು ಸರಿಯಾದ ರೀತಿ ಬಳಸುವುದು ಮುಖ್ಯ. ಶೌಚಾಲಯವನ್ನು ಸರಿಯಾಗಿ ಬಳಸದಿದ್ದರೆ ರೋಗರುಜನಗಳಿಗೆ ದಾರಿಮಾಡಿಕೊಟ್ಟಂತೆ ಆಗುತ್ತದೆ. ಶೌಚಾಲಯ ಬಳಸಿ ಬಯಲು ಬಹಿರ್ದೆಸೆಮುಕ್ತ ಸಮಾಜ ನಿರ್ಮಾಣ ಮಾಡೋಣ ಹಾಗೂ ಸಾಧ್ಯವಾದಷ್ಟು ಜನರಲ್ಲಿ ಶೌಚಾಲಯದ ಬಗ್ಗೆ ಅರಿವು ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರೌಢಶಾಲೆಯ ಮುಖ್ಯಶಿಕ್ಷಕಿ ಬಿ.ನಿರ್ಮಲ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಸಂತಕುಮಾರ ಮತ್ತು ಶಿಕ್ಷಕ ವೃಂದದವರು ಭಾಗವಹಿಸಿದ್ದರು. ನಂತರ ವಿದ್ಯಾರ್ಥಿಗಳು ಮಂಗಳವಾರಪೇಟೆ ಬೀದಿ ಬೀದಿಗಳಲ್ಲಿ ಜಾಥಾ ನಡೆಸಿ ಶೌಚಾಲಯ ನಿರ್ಮಾಣ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT