ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ಉಳಿತಾಯ ಬಡ್ಡಿ ದರ ಹೆಚ್ಚಳ ಸಾಧ್ಯತೆ ಇಲ್ಲ

Last Updated 26 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ತ್ರೈಮಾಸಿಕ ಅವಧಿಯಲ್ಲಿ (ಏಪ್ರಿಲ್‌ – ಜೂನ್‌) ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳು ಹೆಚ್ಚಳಗೊಳ್ಳುವ ಸಾಧ್ಯತೆಯನ್ನು ಹಣಕಾಸು ಸಚಿವಾಲಯ ತಳ್ಳಿ ಹಾಕಿದೆ.

ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್‌), ರಾಷ್ಟ್ರೀಯ ಉಳಿತಾಯ ಸರ್ಟಿಫಿಕೇಟ್‌ (ಎನ್‌ಎಸ್‌ಸಿ), ಹಿರಿಯ ನಾಗರಿಕರ  ಉಳಿತಾಯ ಯೋಜನೆ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರಗಳನ್ನು ಸರ್ಕಾರವು ಪ್ರತಿ ತ್ರೈಮಾಸಿಕಕ್ಕೊಮ್ಮೆ ನಿಗದಿ ಮಾಡುತ್ತದೆ.

ಸರ್ಕಾರಿ ಸಾಲಪತ್ರಗಳಲ್ಲಿನ ಹೂಡಿಕೆಯ ಪ್ರತಿಫಲದಲ್ಲಿನ ಹೆಚ್ಚಳವು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳಕ್ಕೆ ಇಂಬು ನೀಡಲಿದೆ ಎಂದು ವರದಿಯಾಗಿತ್ತು.

‘ಅಂತಹ ಸಾಧ್ಯತೆ ಸದ್ಯಕ್ಕೆ ಇಲ್ಲ’ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್‌ಚಂದ್ರ ಗರ್ಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT