ಯಾದಗಿರಿ

ಡಾ.ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಮಾಲಕರಡ್ಡಿ ಒತ್ತಾಯ

‘ಯೋಜನೆ 2014–15ರಲ್ಲಿ ವಿಸ್ತರಣೆಯಾದ ನಂತರ ಇಲ್ಲಿಯವರೆಗೆ ಒಟ್ಟು ₹10,567 ಕೋಟಿ ನಿಗದಿಪಡಿಸಿದ್ದು ಇದರಲ್ಲಿ 6,298.15 ಕೋಟಿ ವೆಚ್ಚವಾಗಿದೆ’

ಯಾದಗಿರಿ: ‘ರಾಜ್ಯ ಸರ್ಕಾರ ಡಾ.ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಶಾಸಕ ಡಾ.ಎ.ಬಿ. ಮಾಲಕರಡ್ಡಿ ಸರ್ಕಾರವನ್ನು ಒತ್ತಾಯಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತ ತಮ್ಮ ಪ್ರಶ್ನೆಗೆ ಉತ್ತರಿಸಿದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಎಂ.ಆರ್. ಸೀತಾರಾಂ ಅವರ ಲಿಖಿತ ಉತ್ತರಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಮ್ಮ ಪ್ರದೇಶ ತೀರಾ

ಹಿಂದುಳಿದಿರುವುದರಿಂದ ಡಾ.ನಂಜುಂಡಪ್ಪ ವರದಿ ಪ್ರಕಾರ ಅಭಿವೃದ್ಧಿಯನ್ನು ಕೈಗೊಳ್ಳಬೇಕಾದ ಅಗತ್ಯ ಇದೆ. ಅದನ್ನು ತೀರಾ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಹೇಳಿದರು.

‘ಯೋಜನೆ 2014–15ರಲ್ಲಿ ವಿಸ್ತರಣೆಯಾದ ನಂತರ ಇಲ್ಲಿಯವರೆಗೆ ಒಟ್ಟು ₹10,567 ಕೋಟಿ ನಿಗದಿಪಡಿಸಿದ್ದು ಇದರಲ್ಲಿ 6,298.15 ಕೋಟಿ ವೆಚ್ಚವಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.

ವಿಶೇಷ ಅಭಿವೃದ್ಧಿ ಯೋಜನೆಯಡಿ ಯಾದಗಿರಿ ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಕಾಮಗಾರಿಗಳಿಗಾಗಿ ₹114.45 ಕೋಟಿ ನಿಗದಿ ಮಾಡಲಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

‘ಯೋಜನೆಗಳು ಎಷ್ಟೇ ಇರಲಿ ಅವುಗಳನ್ನು ಪ್ರಾಮಾಣಿವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಯಾದಾಗಲೇ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಸಾಧ್ಯ.’ ಎಂದು ಮಾಲಕರಡ್ಡಿ ಹೇಳಿದರು.

Comments
ಈ ವಿಭಾಗದಿಂದ ಇನ್ನಷ್ಟು

ಕಕ್ಕೇರಾ
ಮತದಾನ ಅತ್ಯಂತ ಪವಿತ್ರ ಕಾರ್ಯ: ಬಸವರಾಜ ಮಹಾಮನಿ

‘ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಹೇಳಿದಂತೆ ಮತದಾನ ಶ್ರೇಷ್ಠದಾನ. ಅದನ್ನು ಹಣ ಅಥವಾ ಯಾವುದೇ ಆಮಿಷಕ್ಕೆ ಮಾರಿಕೊಳ್ಳಬೇಡಿ. ಮತದಾನ ದೇಶದ ಪ್ರತಿಯೊಬ್ಬ ನಾಗರಿಕ ಅತ್ಯಂತ ಮಹತ್ವದ್ದಾಗಿದೆ....

20 Apr, 2018

ಹುಣಸಗಿ
‘ಅಭಿವೃದ್ಧಿ ಕಾರ್ಯ ಗುರುತಿಸಿ ಮತ ನೀಡಿ’

ಕಳೆದ ಐದು ವರ್ಷದ ಅವಧಿಯಲ್ಲಿ ಬೈಲಾಪುರ ತಾಂಡಾ ಒಂದರಲ್ಲಿಯೇ ₹1 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ...

20 Apr, 2018
ವರಿಷ್ಠರ ತೀರ್ಮಾನಕ್ಕೆ ತೀವ್ರ ಆಕ್ಷೇಪ

ಯಾದಗಿರಿ
ವರಿಷ್ಠರ ತೀರ್ಮಾನಕ್ಕೆ ತೀವ್ರ ಆಕ್ಷೇಪ

20 Apr, 2018

ಯಾದಗಿರಿ
ಜಿಲ್ಲೆಯಲ್ಲಿ ಐದು ನಾಮಪತ್ರ ಸಲ್ಲಿಕೆ

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಗುರುವಾರ ಒಟ್ಟು ಐದು ನಾಮಪತ್ರಗಳು ಸಲ್ಲಿಕೆಯಾಗಿವೆ. ಯಾದಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ...

20 Apr, 2018
ಯಾದಗಿರಿಯಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ

ಯಾದಗಿರಿ
ಯಾದಗಿರಿಯಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ

19 Apr, 2018