ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣೆ: ಮೂರನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಮೂವರು ಸಚಿವರು ಸೇರಿ 15 ಶಾಸಕರಿಗೆ ಇಲ್ಲ ಅವಕಾಶ
Last Updated 20 ನವೆಂಬರ್ 2017, 11:03 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್‌ ವಿಧಾನಸಭೆ ಚುನಾವಣೆಗೆ 28 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಸೋಮವಾರ ಬಿಡುಗಡೆ ಮಾಡಿದೆ. ಮೂವರು ಸಚಿವರು ಸೇರಿ 15 ಜನ ಹಾಲಿ ಶಾಸಕರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಜಯಂತಿ ಕವಾಡಿಯಾ ಸೇರಿ ಪಟೇಲ್‌ ಸಮುದಾಯದ ಮೂವರು ಸಚಿವರ ಹೆಸರನ್ನು ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟಿದೆ. ಹಾರ್ದಿಕ್‌ ಪಟೇಲ್‌ ನೇತೃತ್ವದಲ್ಲಿ ಪಟೇಲ್‌ ಸಮುದಾಯದ ಮೀಸಲು ಹೋರಾಟದ ಪ್ರಭಾವ ಹೆಚ್ಚಿರುವ ಕ್ಷೇತ್ರಗಳನ್ನು ಈ ಮೂವರು ಸಚಿವರು ಪ್ರತಿನಿಧಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಆನಂದಿಬೆನ್‌ ಪಟೇಲ್ ಸಹವರ್ತಿಗಳಾದ ಮಾಜಿ ಸಚಿವೆ ವಾಸುಬೆನ್ ತ್ರಿವೇದಿ ಹಾಗೂ ಐಕೆ ಜಡೇಜಾ ಅವರ ಹೆಸರು ಸಹ ಪಟ್ಟಿಯಲ್ಲಿಲ್ಲ ಎಂದು ಹಿಂದುಸ್ತಾನ್ ಟೈಮ್ಸ್‌ ವರದಿ ಮಾಡಿದೆ.

182 ವಿಧಾನಸಭಾ ಕ್ಷೇತ್ರಗಳ ಪೈಕಿ ಈವರೆಗೆ 134 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ‌30 ಹಾಲಿ ಶಾಸಕರ ಹೆಸರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಡಿಸೆಂಬರ್‌ 9 ಹಾಗೂ ಡಿ.14ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿ.18ಕ್ಕೆ ಚುನವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT