ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಇಲಾಖೆಯ ಆನ್‌ಲೈನ್‌ ಸೇವೆಗಳು ತಾತ್ಕಾಲಿಕ ಸ್ಥಗಿತ

ಎನ್‌‌ಐಸಿ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆ
Last Updated 20 ನವೆಂಬರ್ 2017, 11:18 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ಇಲಾಖೆಯ ದತ್ತಾಂಶಗಳನ್ನು ಶೇಖರಿಸಿಟ್ಟಿದ್ದ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಅದರಿಂದಾಗಿ ಇಲಾಖೆಯ ಆನ್‌ಲೈನ್‌ ಸೇವೆಗಳೆಲ್ಲ ಸೋಮವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

ಇಲಾಖೆಯ ಜಾಲತಾಣ ’www.transport.karnataka.gov.in’ ಮೂಲಕ ಲಭ್ಯವಾಗುತ್ತಿದ್ದ ಕಲಿಕಾ, ಚಾಲನಾ ಪ್ರಮಾಣ ಪತ್ರ ಮತ್ತು ಹೊಸ ವಾಹನಗಳ ನೋಂದಣಿಗಾಗಿ ಅರ್ಜಿ ಸಲ್ಲಿಸುವ ಹಾಗೂ ಇ–ಪಾವತಿ ಸೇವೆಗಳು ನಿಷ್ಕ್ರಿಯಗೊಂಡಿವೆ. ಇದರಿಂದ ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಕೆಲಸಕ್ಕೆ ಅಡ್ಡಿಯಾಗಿದೆ.

‘ಆನ್‌ಲೈನ್‌ ಸೇವೆ ಹಾಗೂ ಜಾಲತಾಣದ ನಿರ್ವಹಣೆಯನ್ನು ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ವಹಿಸಿಕೊಂಡಿದೆ. ಈಗ ಸರ್ವರ್‌ನಲ್ಲಿ ಕಾಣಿಸಿಕೊಂಡಿರುವ ತೊಂದರೆಯನ್ನು ಆ ಸೆಂಟರ್‌ನ ಸಿಬ್ಬಂದಿಯೇ ಸರಿಪಡಿಸುತ್ತಿದ್ದಾರೆ. ಸೇವೆಗಳು ಮರು ಆರಂಭವಾಗಲು ಎಷ್ಟು ದಿನಗಳು ಬೇಕು ಎಂಬುದನ್ನು ಅವರು ಹೇಳುತ್ತಿಲ್ಲ’ ಎಂದು ಸಾರಿಗೆ ಇಲಾಖೆಯ ಆಯುಕ್ತ ಬಿ.ದಯಾನಂದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT