ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ: ದೋಷ ಸರಿಪಡಿಸಿ

Last Updated 20 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯ ಚುನಾವಣಾಧಿಕಾರಿ ಅವರ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಮತದಾರರ ಪಟ್ಟಿಯ ಕರಡಿನಲ್ಲಿರುವ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಯುನೈಟೆಡ್‌ ಬೆಂಗಳೂರು ಸಂಸ್ಥೆಯ ಸದಸ್ಯರು ರಾಜ್ಯ ಚುನಾವಣಾ ಆಯೋಗಕ್ಕೆ ಸೋಮವಾರ ಮನವಿ ನೀಡಿದರು.

‘ಈ ತಿಂಗಳ ಆರಂಭದಲ್ಲಿ ಮತದಾರರ ಪಟ್ಟಿಯ ಕರಡನ್ನು ಪ್ರಕಟಿಸಲಾಗಿದೆ. ಇದು ಸ್ಕ್ಯಾನ್‌ ಇಮೇಜ್‌ ರೂಪದಲ್ಲಿದೆ. ಇದಕ್ಕೆ ಕ್ಯಾಪ್ಚಾ ಎಂಬ ಪಾಸ್‌
ವರ್ಡ್‌ ನೀಡಿದ್ದು, ಪ್ರತಿ ಪುಟವನ್ನು ನೋಡಬೇಕಾದರೆ ಈ ಸಂಖ್ಯೆಯನ್ನು ನಮೂದಿಸಬೇಕು. ಇದರಿಂದಾಗಿ ಹೆಸರುಗಳನ್ನು ಹುಡುಕಲು ಕಷ್ಟವಾಗುತ್ತಿದೆ. ಪಟ್ಟಿಯಿಂದ ಹೆಸರು ಕೈಬಿಟ್ಟಿದೆಯೇ, ಮತಗಟ್ಟೆ ಬದಲಾಗಿದೆಯೇ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ’ ಎಂದು 'ನಮ್ಮ ಬೆಂಗಳೂರು ಪ್ರತಿಷ್ಠಾನ'ದ ಸಿಇಒ ಶ್ರೀಧರ್‌ ಪಬ್ಬಿಸೆಟ್ಟಿ ದೂರಿದರು.

‘ಬೇರೆರಾಜ್ಯಗಳಲ್ಲಿ ಮತದಾರರ ಪಟ್ಟಿಯು ಪಿಡಿಎಫ್‌ ರೂಪದಲ್ಲಿ ಇದ್ದು, ಹೆಸರುಗಳನ್ನು ಸುಲಭವಾಗಿ ಹುಡುಕಬಹುದು. ಅಂತಹ ವ್ಯವಸ್ಥೆಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಉಪಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ, ‘ಮತದಾರರ ಪಟ್ಟಿಯ ಕರಡಿನಲ್ಲಿರುವ ನ್ಯೂನತೆಗಳ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ’ ಎಂದರು.

‘1 ಲಕ್ಷ ಮತದಾರರ ಹೆಸರು ಕೈಬಿಟ್ಟಿರುವ ಸಾಧ್ಯತೆ’
‘ಈಗ ಪ್ರಕಟಿಸಿರುವ ಪಟ್ಟಿಯ ಕರಡನ್ನು ಪರಿಶೀಲಿಸಲು ಪ್ರಯತ್ನಿಸಿದ್ದೇವೆ. ಅದರ ಪ್ರಕಾರ, ನಗರದಲ್ಲಿ ಸುಮಾರು 1 ಲಕ್ಷ ಮತದಾರರ ಹೆಸರು ಕೈಬಿಟ್ಟಿರುವ ಸಾಧ್ಯತೆ ಇದೆ. ಆದರೆ, ಇದನ್ನು ದೃಢೀಕರಿಸಲು ಸಾಧ್ಯವಾಗುತ್ತಿಲ್ಲ. ಪಟ್ಟಿಯಲ್ಲಿರುವ ಹೆಸರುಗಳನ್ನು ಹುಡುಕಲು ಸಾಧ್ಯವಾದರೆ, ಈ ಬಗ್ಗೆ ನಿಖರ ಮಾಹಿತಿ ಪಡೆಯಬಹುದು’ ಎಂದು ಯುನೈಟೆಡ್‌ ಬೆಂಗಳೂರು ಸಂಸ್ಥೆಯ ಸಂಚಾಲಕ ಎನ್‌.ಆರ್‌.ಸುರೇಶ್‌ ತಿಳಿಸಿದರು. ‘ಬೂತ್‌ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಮತದಾರರ ಹೆಸರನ್ನು ಪಟ್ಟಿಗೆ ಸೇರ್ಪಡೆ ಮಾಡಬೇಕು. ಆದರೆ, ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಬಿಎಲ್‌ಒಗಳ ಪಟ್ಟಿಯೂ ಹಳೆಯದು. ಅನೇಕ ಅಧಿಕಾರಿಗಳು ನಿವೃತ್ತರಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT