ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ

Last Updated 20 ನವೆಂಬರ್ 2017, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಸೇರಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವ್ಯಾಪ್ತಿಯಲ್ಲಿರುವ 33 ಕೆರೆಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಈ ಕೆರೆಗಳ ಕಾಮಗಾರಿ ವೆಚ್ಚವನ್ನು ಪ್ರಾಧಿಕಾರವೇ ತನ್ನ ಸ್ವಂತ ಸಂಪನ್ಮೂಲದಿಂದ ಭರಿಸುತ್ತಿದೆ’ ಎಂದು ಬಿಡಿಎ ಸ್ಪಷ್ಟಪಡಿಸಿದೆ.

‘ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ₹ 800 ಕೋಟಿ ಕೊಟ್ಟರೂ ರಾಜ್ಯ ಸರ್ಕಾರ ಬಳಕೆ ಮಾಡಿಲ್ಲ’ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್‌ ಮಾಡಿರುವ ಆರೋಪಕ್ಕೆ ಬಿಡಿಎ ಸ್ಪಷ್ಟನೆ ನೀಡಿದೆ.

‘ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಸಮಗ್ರ ಅಭಿವೃದ್ಧಿಗೆ ಪ್ರಮುಖವಾಗಿ ಕೆರೆಗಳಿಗೆ ಹರಿದು ಬರುತ್ತಿರುವ ಒಳಚರಂಡಿ ನೀರನ್ನು ಸಂಸ್ಕರಿಸಿ, ಶುದ್ಧ ನೀರನ್ನು ಕೆರೆಗಳಿಗೆ ಹರಿಯಬಿಡಬೇಕು. ಇದಕ್ಕಾಗಿ ಜಲಮಂಡಳಿಯಿಂದ ಕೊಳಚೆ ನೀರು ಸಂಸ್ಕರಣ ಘಟಕ (ಎಸ್‌ಟಿಪಿ) ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳಿಗೆ ಯೋಜನಾ ವರದಿ ತಯಾರಿಸಲಾಗಿದೆ.

ಈ ಎರಡು ಕೆರೆಗಳ ಅಭಿವೃದ್ಧಿಗೆ ₹559 ಕೋಟಿ ವಿನಿಯೋಗಿಸಲು ಯೋಜನಾ ವರದಿಯನ್ನು ಪ್ರಾಧಿಕಾರವೂ ತಯಾರಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು. ವಿಶೇಷ ಅನುದಾನ ಬಿಡುಗಡೆಗಾಗಿ ನಗರಾಭಿವೃದ್ಧಿ ಇಲಾಖೆಯಿಂದಲೂ ಕೇಂದ್ರ ನಗರಾಭಿವೃದ್ಧಿ ಇಲಾಖೆ ಸಚಿವಾಲಯ, ಪರಿಸರ ಮತ್ತು ಅರಣ್ಯ ಇಲಾಖೆ ಸಚಿವಾಲಯ ಜಾಗೂ ಜಲಸಂಪನ್ಮೂಲ ಸಚಿವಾಲಯಕ್ಕೆ 2016ರ ಜನವರಿ 6ರಂದು ಪತ್ರ ಬರೆಯಲಾಗಿತ್ತು.

ಆದರೆ, ಕೇಂದ್ರ ಸರ್ಕಾರ ಯಾವುದೇ ಅನುದಾನ ಮಂಜೂರು ಮಾಡಿಲ್ಲ. ಕೆರೆಗಳ ಅಭಿವೃದ್ಧಿಗೆ ಬೇಕಾದ ಪೂರ್ಣ ಅಂದಾಜು ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸುವಂತೆ ಪತ್ರಮುಖೇನ ತಿಳಿಸಿದೆ’ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಎನ್‌ಜಿಟಿ ನಿರ್ದೇಶನಗಳನ್ನು ಪಾಲಿಸಲು ಲಭ್ಯವಿರುವ ಅನುದಾನದಲ್ಲೇ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಬೆಳ್ಳಂದೂರು ಕೆರೆ ಪುನಶ್ಚೇತನಕ್ಕಾಗಿ ಅಂದಾಜು ಮೊತ್ತ ₹2.50 ಕೋಟಿಯಲ್ಲಿ ಕಳೆ ತೆರವು, ನೊರೆ ಸಮಸ್ಯೆ ಪರಿಹಾರಕ್ಕೆ ₹2 ಕೋಟಿ ವೆಚ್ಚದಲ್ಲಿ ಕೆರೆ ಕೋಡಿಯಲ್ಲಿ ವೈರ್‌ನೆಟ್‌ ಮೆಶ್‌ ಅಳವಡಿಸಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT