ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿಗೆ ಮರಾಠಾ ಸಮಾಜದ ಆಗ್ರಹ

Last Updated 21 ನವೆಂಬರ್ 2017, 7:56 IST
ಅಕ್ಷರ ಗಾತ್ರ

ಬೆಳಗಾವಿ: ಮರಾಠಾ ಸಮಾಜದವರಿಗೆ 3ಬಿ ಬದಲಿಗೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಮರಾಠಾ ಕ್ರಾಂತಿ ಮೋರ್ಚಾ ಕರ್ನಾಟಕ ಸಂಘಟನೆ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಬಂದಿರುವ ಮರಾಠಾ ಸಮಾಜದವರು ಕೊಂಡಸಕೊಪ್ಪ ಗ್ರಾಮದ ಗುಡ್ಡದಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಹಾಸ್ಟೆಲ್‌ಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್, ಶಾಸಕರಾದ ಗೋವಿಂದ ಕಾರಜೋಳ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT