ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರರಂಗದಲ್ಲಿ ಪುರುಷರ ಮೇಲೂ ಲೈಂಗಿಕ ಶೋಷಣೆ ನಡೆಯುತ್ತಿದೆ: ರಾಧಿಕಾ ಆಪ್ಟೆ

Last Updated 21 ನವೆಂಬರ್ 2017, 11:13 IST
ಅಕ್ಷರ ಗಾತ್ರ

ಮುಂಬೈ: ‘ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಮಾತ್ರವಲ್ಲ ಪುರುಷರ ಮೇಲೂ ಲೈಂಗಿಕ ಶೋಷಣೆ ನಡೆಯುತ್ತಿದೆ’ ಎಂದು ನಟಿ ರಾಧಿಕಾ ಆಪ್ಟೆ ಹೇಳಿದ್ದಾರೆ.

ಬಾಲಿವುಡ್‌ನಲ್ಲಿ ಪುರುಷರ ಮೇಲಿನ ದೌರ್ಜನ್ಯಗಳ ಬಗ್ಗೆ ಮೊದಲು ತುಟಿಬಿಚ್ಚಿದವರು ಇರ್ಫಾನ್ ಖಾನ್. ಚಿತ್ರರಂಗದಲ್ಲಿ ತಮಗಾದ ಕೆಟ್ಟ ಅನುಭವಗಳನ್ನು ಇರ್ಫಾನ್ ಬಹಿರಂಗಗೊಳಿಸಿದ್ದರು. ‘ಹೆಚ್ಚು ಮಹಿಳೆಯರು ತಮಗಾದ ಕೆಟ್ಟ ಅನುಭವಗಳನ್ನು ಬಿಚ್ಚಿಡುತ್ತಿದ್ದಾರೆ. ತಮಗಾದ ಕೆಟ್ಟ ಅನುಭವಗಳ ಬಗ್ಗೆ ದನಿ ಎತ್ತಲು ಹಾಗೂ ದೂರು ನೀಡಲು ಸೂಕ್ತ ವೇದಿಕೆ ಅಗತ್ಯ’ ಎಂದು ರಾಧಿಕಾ ತಿಳಿಸಿದ್ದಾರೆ.

‘ಚಿತ್ರರಂಗದಲ್ಲಿ ಸಾಕಷ್ಟು ಪುರುಷರು ಕೂಡಾ ಲೈಂಗಿಕ ಶೋಷಣೆ ಅನುಭವಿಸುತ್ತಿದ್ದಾರೆ. ಇದರ ಬಗ್ಗೆ ನನಗೆ ಸಾಕಷ್ಟು ಮಾಹಿತಿ ಇದೆ. ಇತ್ತೀಚೆಗೆ ಈ ಶೋಷಣೆಯ ಬಗ್ಗೆ ದನಿ ಎತ್ತುವವರು ಹೆಚ್ಚಾಗಿದ್ದಾರೆ’ ಎಂದಿದ್ದಾರೆ.

‘ಚಿತ್ರರಂಗದಲ್ಲಿ ಈಗ ಸಿನಿಮಾ ತಯಾರಿಕಾ ಸಂಸ್ಥೆಗಳನ್ನು ಹೊಂದಿರುವವರು ಮಾತ್ರ ಬರುತ್ತಿಲ್ಲ. ಸಮಾಜದ ಬೇರೆ ಬೇರೆ ವರ್ಗಗಳ ಜನರೂ ಈಗ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಹೀಗಿರುವಾಗ ಚಿತ್ರರಂಗದಲ್ಲಿ ದುಡಿಯುತ್ತಿರುವವರಿಗೆ ಸೂಕ್ತ ವೇದಿಕೆ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT