ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯಾಸದ ವೇಳೆ ವಾರ್ನರ್‌ಗೆ ಗಾಯ

Last Updated 21 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬ್ರಿಸ್ಬೇನ್‌: ಆಸ್ಟ್ರೇಲಿಯಾ ತಂಡದ ಉಪ ನಾಯಕ ಡೇವಿಡ್‌ ವಾರ್ನರ್‌ ಮಂಗಳವಾರ ಗಾಯಗೊಂಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಆ್ಯಷಸ್‌ ಸರಣಿಯಲ್ಲಿ ಶುಭಾರಂಭ ಮಾಡುವ ಕನಸು ಹೊತ್ತಿರುವ ಕಾಂಗರೂಗಳ ನಾಡಿನ ತಂಡ ಇದಕ್ಕಾಗಿ ಕಠಿಣ ತಾಲೀಮು ನಡೆಸುತ್ತಿದೆ.

ಮಂಗಳವಾರ ಗಾಬಾ ಮೈದಾನದಲ್ಲಿ ವಾರ್ನರ್‌ ಕ್ಯಾಚ್‌ ಹಿಡಿಯುವ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಚೆಂಡನ್ನು ಹಿಡಿಯಲು ಮುಂದಾದಾಗ ಕುತ್ತಿಗೆಗೆ ಪೆಟ್ಟು ಬಿದ್ದಿತು. ಕೂಡಲೇ ಅವರನ್ನು ತಂಡದ ವೈದ್ಯಕೀಯ ಸಿಬ್ಬಂದಿ ಡ್ರೆಸಿಂಗ್‌ ಕೊಠಡಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿದರು.

‘ಕ್ಯಾಚ್‌ ಹಿಡಿಯುವ ವೇಳೆ ಕುತ್ತಿಗೆಗೆ ಏಟು ಬಿದ್ದಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆದಿದ್ದೇನೆ. ಇನ್ನು ಒಂದು ದಿನ ವಿಶ್ರಾಂತಿ ಪಡೆದರೆ ಎಲ್ಲವೂ ಸರಿಯಾಗಲಿದೆ’ ಎಂದು ವಾರ್ನರ್‌ ಹೇಳಿದ್ದಾರೆ.

ಆ್ಯಷಸ್‌ ಸರಣಿಯ ಮೊದಲ ಪಂದ್ಯ ನವೆಂಬರ್‌ 23ರಿಂದ ನಡೆಯಲಿದೆ. ವಾರ್ನರ್‌ ತವರಿನಲ್ಲಿ 60ರ ಸರಾಸರಿಯಲ್ಲಿ ರನ್‌ ಗಳಿಸಿದ್ದು, ಬ್ಯಾಟಿಂಗ್‌ ವಿಭಾಗದಲ್ಲಿ ಆಸ್ಟ್ರೇಲಿಯಾದ ಶಕ್ತಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT