ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ನಾಲ್ಕನೇ ದಿನವೂ ಉತ್ತಮ ವಹಿವಾಟು

Last Updated 21 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ನಾಲ್ಕನೇ ದಿನವೂ ಉತ್ತಮ ವಹಿವಾಟು ನಡೆಯಿತು.

ಜಾಗತಿಕ ವಿದ್ಯಮಾನಗಳ ಪ್ರಭಾವ ಮತ್ತು ಔಷಧ ವಲಯದ ಷೇರುಗಳ ಖರೀದಿ ಹೆಚ್ಚಾಗಿದ್ದರಿಂದ ಸೂಚ್ಯಂಕಗಳು ಏರಿಕೆ ಕಂಡವು. ಆದರೆ ಲಾಭ ಗಳಿಕೆ ಉದ್ದೇಶದ ವಹಿವಾಟು ನಡೆದಿದ್ದರಿಂದ ಸೂಚ್ಯಂಕ ಹೆಚ್ಚಿನ ಏರಿಕೆ ಕಾಣದಂತಾಯಿತು ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 118 ಅಂಶ ಹೆಚ್ಚಾಗಿ 33,478 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು. ನವೆಂಬರ್‌ 6 ರ ನಂತರ ವಹಿವಾಟಿನ ಗರಿಷ್ಠ ಅಂತ್ಯ ಇದಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್ಇ) 28 ಅಂಶ ಹೆಚ್ಚಾಗಿ 10,326 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT