ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕ ಮಕ್ಕಳು; ಭಾರತದಲ್ಲೇ ಹೆಚ್ಚು

Last Updated 22 ನವೆಂಬರ್ 2017, 8:35 IST
ಅಕ್ಷರ ಗಾತ್ರ

ಕಲಬುರ್ಗಿ: ‘ಜಗತ್ತಿನಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 14.6 ಕೋಟಿ ಇದ್ದರೆ ಭಾರತದಲ್ಲಿ 5.6 ಕೋಟಿ ಇದೆ. ಆದ್ದರಿಂದ ಅಪೌಷ್ಟಿಕತೆ ನಿವಾರಣೆಗೆ ಶ್ರಮಿಸಬೇಕು’ ಎಂದು ಗುಜರಾತಿನ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಪ್ರಧಾನ ಸಲಹೆಗಾರರಾದ ಡಾ.ಮಂಜುಶರ್ಮಾ ಹೇಳಿದರು.

ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಮಾನವ ಅಭ್ಯುದಯಕ್ಕಾಗಿ ರೋಗ ನಿರ್ವಹಣೆಯಲ್ಲಿನ ವಿನೂತನ ಬೆಳವಣಿಗೆಗಳು’ ಕುರಿತು ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಿಂದ ಅನೇಕ ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸಂಶೋಧಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಅಪೌಷ್ಟಿಕತೆ, ಅವಧಿಪೂರ್ವ ಶಿಶು ಜನನವನ್ನು ತಡೆಗಟ್ಟಬೇಕು. ಭಾರತೀಯ ವೈದ್ಯಕೀಯ ಸಂಘ, ಜೈವಿಕ ತಂತ್ರಜ್ಞರು ಮತ್ತು ಸಂಶೋಧನಾ ವಿದ್ಯಾರ್ಥಿಗಳ ನೆರವಿನೊಂದಿಗೆ ರೋಗ ನಿರ್ವಹಣೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

‘ಹಸಿವು ಮತ್ತು ರೋಗದಿಂದ ಯಾರೂ ಬಳಲಬಾರದು. ಸಮಾಜದ ಪ್ರತಿಯೊಬ್ಬರ ಆರೋಗ್ಯ ರಕ್ಷಣೆಗೆ ಸರ್ಕಾರ ಬದ್ಧವಾಗಬೇಕು. ದೇಶದ ಭವಿಷ್ಯ ಯುವಕರ ಮೇಲೆ ನಿಂತಿದ್ದು, ನವ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ. ಎಲ್ಲರೂ ಒಟ್ಟಾಗಿ ಸ್ವಸ್ಥ ಭಾರತ, ಸ್ವಚ್ಛ ಭಾರತದ ಕನಸು ನನಸು ಮಾಡಬೇಕು. ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ತಿಳಿಸಿದರು.

‘ಭಾರತದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚಾಗಿದೆ. ರೋಗ ನಿವಾರಣೆ ಜತೆಗೆ ಉತ್ತಮ ಆರೋಗ್ಯ ಕಲ್ಪಿಸಬೇಕು. ರೋಗಿಯ ವಿವರಗಳನ್ನು ಅವರ ಕುಟುಂಬದ ಸದಸ್ಯರಿಗೆ ಒದಗಿಸಬೇಕು’ ಎಂದು ಹೇಳಿದರು.

ಡೆನ್ಮಾರ್ಕ್‌ನ ಕೋಪನ್ ಹೆಗನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಓಲೆ ಸೊಗಾರ್ಡ್ ಲುಂಡ್, ಶ್ರೀಲಂಕಾದ ಕೊಲಂಬೊ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಕ್ಷಣಿಕಾ ಹಿರುಂಬುರೆಗಾಮಾ, ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಎಲ್.ಮಹೇಶ್ವರ, ಹೈದರಾಬಾದ್‌ನ ಉಸ್ಮಾನಿಯಾ  ವಿಶ್ವವಿದ್ಯಾಲಯದ ಡಾ. ಕೆ.ವಿ.ರಾವ್ ಮಾತನಾಡಿದರು.

ಕುಲಪತಿ ಪ್ರೊ.ಎಸ್.ಆರ್.ನಿರಂಜನ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್ ಸದಸ್ಯ ಈಶ್ವರ ಇಂಗನ್, ಕುಲಸಚಿವ ಪ್ರೊ.ದಯಾನಮದ ಅಗಸರ, ಮೌಲ್ಯಮಾಪನ ಕುಲಸಚಿವ ಡಾ. ಡಿ.ಎಂ.ಮದರಿ, ಹಣಕಾಸು ಅಧಿಕಾರಿ ಪ್ರೊ.ರಾಜನಾಳಕರ ಲಕ್ಷ್ಮಣ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ. ಕೆ.ಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT