ಶಿವಮೊಗ್ಗ

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

ಶತಮಾನಗಳ ಕಾಲದಿಂದಲೂ ಮಾದಿಗ ಸಮಾಜ ತುಳಿತಕ್ಕೆ ಒಳಗಾಗಿದ್ದು ಯಾವುದೆ ಅಭಿವೃದ್ಧಿ ಕಾಣದೆ ಮೇಲ್ವರ್ಗದವರ ದೌರ್ಜನ್ಯ, ದಬ್ಬಾಳಿಕೆ ಮತ್ತು ಅನ್ಯಾಯಗಳಿಗೆ ತುತ್ತಾಗಿದೆ

ಶಿವಮೊಗ್ಗ : ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ತರಬೇಕು ಹಾಗೂ ಮಾದಿಗ ಸಮಾಜದವರಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ ಸಮಿತಿ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಸಾವಿರಾರು ಜನರು ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕಿನ ಸಿದ್ಲಿಪುರ ಗ್ರಾಮದ ಮಾದಿಗ ಸಮಾಜದವರಿಗೆ ಪ್ರಭಾವಿ ಕುಟುಂಬದವರಿಂದ ಭೂ ಕಬಳಿಕೆ ದೌರ್ಜನ್ಯ ನಡೆಯುತ್ತಿದ್ದು ಇದಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದರು.

ಶತಮಾನಗಳ ಕಾಲದಿಂದಲೂ ಮಾದಿಗ ಸಮಾಜ ತುಳಿತಕ್ಕೆ ಒಳಗಾಗಿದ್ದು ಯಾವುದೆ ಅಭಿವೃದ್ಧಿ ಕಾಣದೆ ಮೇಲ್ವರ್ಗದವರ ದೌರ್ಜನ್ಯ, ದಬ್ಬಾಳಿಕೆ ಮತ್ತು ಅನ್ಯಾಯಗಳಿಗೆ ತುತ್ತಾಗಿದೆ. ಇದಕ್ಕೆ ಉದಾಹರಣೆಯಾಗಿ ಭದ್ರಾವತಿ ತಾಲ್ಲೂಕು ಸಿದ್ಲಿಪುರ ಗ್ರಾಮದ ಮಾದಿಗ ಸಮಾಜದವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಇಲ್ಲಿನ ಮಾದಿಗ ಸಮಾಜದ ಕುಟುಂಬಗಳಿಗೆ ಅಂದಿನ ಮೈಸೂರು ಸರ್ಕಾರದ ಅವಧಿಯಲ್ಲಿ 31 ಎಕರೆ 9 ಗುಂಟೆ ಜಮೀನು ನೀಡಲಾಗಿದೆ. ಅಂದಿನ ಕಂದಾಯ ಮಂತ್ರಿ ಬಸವಲಿಂಗಪ್ಪ ಅವರು 1978ರಲ್ಲಿ ವಿವೋ ಎಸಿ ಕಾಯ್ದೆಯಡಿ ಈ ಜಮೀನನ್ನು ಯಾವುದೆ ರೀತಿಯಲ್ಲೂ ವಂಶಸ್ಥರನ್ನು ಹೊರತು ಬೇರೆ ಯಾರಿಗೂ ಮಾರಾಟ ಮಾಡದಂತೆ ಉಲ್ಲೇಖಿಸಲಾಗಿದೆ.

ಒಂದು ವೇಳೆ ಮಾರಾಟ ಮಾಡಿದ್ದರೂ ಇನಾಂ ಜಮೀನಾಗಿರುವುದರಿಂದ ಮೂಲ ಮಂಜೂರಿದಾರರಿಗೆ ಬಿಡಿಸಿಕೊಡಬೇಕೆಂದು ಕಾಯ್ದೆ ರೂಪಿಸಲಾಗಿದೆ. ಆದರೂ ಪ್ರಭಾವಿ ವ್ಯಕ್ತಿಗಳು ಸುಳ್ಳು ದಾಖಲೆ ಸಲ್ಲಿಸಿ ತಮ್ಮ ಹೆಸರಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಡಳಿತ ಶೀಘ್ರವೇ ಅನ್ಯಾಯಕ್ಕೊಳಗಾದ ದಲಿತರಿಗೆ ನ್ಯಾಯ ದೊರಕಿಸಿಕೊಡಬೇಕು. ಸರ್ಕಾರ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಮಾದಿಗ ಸಮಾಜದ ಹಿತರಕ್ಷಣೆ ಕಾಪಾಡಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ಭಾನುಪ್ರಕಾಶ್, ಹೊಳೆಯಪ್ಪ, ಮಂಜಪ್ಪ, ರವಿಕುಮಾರ್, ರಂಗಪ್ಪ, ಗಂಗಾಧರ್, ಮಹದೇವಪ್ಪ, ಗುರುರಾಜ್, ಹನುಮಂತಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಭದ್ರಾವತಿ: ವ್ಯಕ್ತಿ ಪ್ರತಿಷ್ಠೆಗೆ ಹಲವು ಸವಾಲು

ಶಿವಮೊಗ್ಗ
ಭದ್ರಾವತಿ: ವ್ಯಕ್ತಿ ಪ್ರತಿಷ್ಠೆಗೆ ಹಲವು ಸವಾಲು

20 Jan, 2018
ಸ್ವಚ್ಚ ಶಾಲೆ, ಸ್ವಚ್ಚ ಗ್ರಾಮ, ಹಸಿರು ಶಾಲೆ ಪುರಸ್ಕಾರ

ಹೊಸನಗರ
ಸ್ವಚ್ಚ ಶಾಲೆ, ಸ್ವಚ್ಚ ಗ್ರಾಮ, ಹಸಿರು ಶಾಲೆ ಪುರಸ್ಕಾರ

20 Jan, 2018

ಶಿಕಾರಿಪುರ
ವಿದೇಶಿ ಬಾನಾಡಿಗಳ ಕಲರವ

ಬಿಸಿಲು ಸಂದರ್ಭದಲ್ಲಿ ಕೆರೆಯಲ್ಲಿ ವಿಶ್ರಾಂತಿ ಪಡೆಯುವ ಹಕ್ಕಿಗಳು ಸಂಜೆ ತಮ್ಮ ಆಹಾರ ಹುಡುಕಿಕೊಂಡು ತೆರಳುತ್ತವೆ.

20 Jan, 2018
ನೂತನ ಪಿಂಚಣಿ ಯೋಜನೆ ರದ್ದುಪಡಿಸಲು ಆಗ್ರಹ

ಶಿವಮೊಗ್ಗ
ನೂತನ ಪಿಂಚಣಿ ಯೋಜನೆ ರದ್ದುಪಡಿಸಲು ಆಗ್ರಹ

19 Jan, 2018

ಕಾರ್ಗಲ್
ಮರಳು ಸಾಗಣೆ: ಚಾಲಕನ ಬಂಧನ ವಿರೋಧಿಸಿ ಪ್ರತಿಭಟನೆ

ನಿರಪರಾಧಿಗಳನ್ನು ವಿನಾಕಾರಣ ಜೈಲಿಗೆ ಕಳುಹಿಸಿರುವ ಪೋಲೀಸರ ಕ್ರಮ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವಂತಾಗಿದೆ ಎಂದು ವರ್ತಕರಾದ ಶ್ರೀನಿವಾಸ ಎಂ.ಪೈ ಆರೋಪಿಸಿದರು.

19 Jan, 2018