ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ವಿಳಂಬ: ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ

Last Updated 22 ನವೆಂಬರ್ 2017, 14:54 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವರಾಗಿರುವ ಅಲ್ಫೋನ್ಸ್ ಕಣ್ಣಂತಾನಂ ಅವರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂಪಾಲ್ ವಿಮಾನ ನಿಲ್ದಾಣಕ್ಕೆ ಕಣ್ಣಂತಾನಂ ಆಗಮಿಸಿದ್ದರು. ಸಚಿವರು ಬರುತ್ತಿರುವ ಕಾರಣ ವಿಮಾನ ವಿಳಂಬವಾಗಿ ಹಾರಾಟ ನಡೆಸಿತ್ತು.

ಸಚಿವರಿಗಾಗಿ ವಿಮಾನ ವಿಳಂಬ ಮಾಡಿದ್ದಕ್ಕಾಗಿ ಸಿಡಿಮಿಡಿಗೊಂಡ ವೈದ್ಯೆ ವಿಮಾನ ನಿಲ್ದಾಣದಲ್ಲೇ ಕಣ್ಣಂತಾನಂ ಅವರ ಮೇಲೆ ರೇಗಾಡಿದ್ದಾರೆ

ವಿಳಂಬವಾದ ಕಾರಣ ತಾನು ಪಟ್ನಾಕ್ಕೆ ಹೋಗುವ ವಿಮಾನ ಕೈ ತಪ್ಪಿದೆ. ಗಂಭೀರ ಸ್ಥಿತಿಯಲ್ಲಿರುವ ಒಬ್ಬ ರೋಗಿಗೆ ಚಿಕಿತ್ಸೆ ನೀಡಲು ನಾನು ಹೋಗುತ್ತಿದ್ದೆ. ಆ ರೋಗಿಯ ಜೀವಕ್ಕೆ ಅಪಾಯವಾದರೆ ಏನು ಮಾಡುತ್ತೀರಿ? ಎಂದು ವೈದ್ಯೆ ಪ್ರಶ್ನಿಸಿದ್ದಾರೆ. ವೈದ್ಯೆಯ ಪ್ರಶ್ನೆಗೆ ಗಲಿಬಿಲಿಗೊಂಡ ಸಚಿವರು ಶಾಂತರಾಗಿ ಶಾಂತರಾಗಿ ಎಂದಷ್ಟೇ ಉತ್ತರಿಸಿದ್ದಾರೆ.

ಇದರ ನಡುವೆಯೇ ಸಚಿವರು ಮುಂದೆ ಹೋಗಲು ಯತ್ನಿಸಿದಾಗ ಅವರ ದಾರಿಗೆ ಅಡ್ಡವಾಗಿ ನಿಂತ ವೈದ್ಯೆ, ಇನ್ನು ಮುಂದೆ ಈ ರೀತಿ ವಿಮಾನ ವಿಳಂಬ ಮಾಡುವುದಿಲ್ಲ ಎಂದು ಬರೆದುಕೊಡಿ ಎಂದು ಒತ್ತಾಯಿಸಿದ್ದಾರೆ. ಸಚಿವರನ್ನು ವೈದ್ಯೆ ತರಾಟೆಗೆ ತೆಗೆದುಕೊಂಡಿರುವ ದೃಶ್ಯ ಸಾಮಾಜಿಕತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT