ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ರಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಯ ಅಂಕಪಟ್ಟಿಯಲ್ಲಿ ಸಲ್ಮಾನ್ ಖಾನ್ ಫೋಟೊ

Last Updated 22 ನವೆಂಬರ್ 2017, 16:07 IST
ಅಕ್ಷರ ಗಾತ್ರ

ನವದೆಹಲಿ: ಆಗ್ರಾದ ಡಾ. ಭಿಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಪದವಿ ಕಾಲೇಜೊಂದರ ವಿದ್ಯಾರ್ಥಿಯ ಅಂಕಪಟ್ಟಿಯಲ್ಲಿ ನಟ ಸಲ್ಮಾನ್ ಖಾನ್ ಫೋಟೊ ಮುದ್ರಣವಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಲಿಗಡ ಜಿಲ್ಲೆಯ ತೇಜ್‌ಪುರದ ಅಮ್ರತಾ ಸಿಂಗ್ ಸ್ಮಾರಕ ಪದವಿ ಕಾಲೇಜಿನ ಪ್ರಥಮ ವರ್ಷದ ಬಿಎ ತರಗತಿಯ ವಿದ್ಯಾರ್ಥಿಯ ಅಂಕಪಟ್ಟಿಯಲ್ಲಿ ಸಲ್ಮಾನ್ ಖಾನ್ ಫೋಟೊ ಮುದ್ರಿತಗೊಂಡಿದೆ. ಅಂಕಪಟ್ಟಿ ವಿತರಣೆಗೂ ಮುನ್ನ ಈ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ವಿಶ್ವವಿದ್ಯಾಲಯದ ಅಧಿಕೃತ ವಕ್ತಾರರು ಪ್ರತಿಕ್ರಿಯೆ ನೀಡಿದ್ದು, ಅಂಕಪಟ್ಟಿಯಲ್ಲಿ ಸಲ್ಮಾನ್ ಖಾನ್ ಫೋಟೊ ಇರುವ ಬಗ್ಗೆ ದೂರು ಸ್ವೀಕರಿಸಿಲ್ಲ ಎಂದಿದ್ದಾರೆ. ಅಲ್ಲದೆ, ವಿಶ್ವವಿದ್ಯಾಲಯದ ಕಡೆಯಿಂದ ಯಾವುದೇ ತಪ್ಪಾಗಿಲ್ಲ ಎಂದು ಸ್ಪಷ್ಟ‍ಪಡಿಸಿದ್ದಾರೆ.

ವಿದ್ಯಾರ್ಥಿಯು ಅರ್ಜಿಯಲ್ಲಿ ಅಂಟಿಸಿ ಕೊಟ್ಟ ಫೋಟೊವನ್ನೇ ಪ್ರಾಂಶುಪಾಲರು ದೃಢೀಕರಿಸಿ ಕಳುಹಿಸಿಕೊಡುತ್ತಾರೆ. ಇದನ್ನು ಮೇಲ್ವಿಚಾರಕರೊಬ್ಬರೂ ಪರಿಶೀಲಿಸಿರುತ್ತಾರೆ ಎಂದು ವಕ್ತಾರರು ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಲಿಗಡ ಜಿಲ್ಲೆಯ ತೇಜ್‌ಪುರದ ಅಮ್ರತಾ ಸಿಂಗ್ ಸ್ಮಾರಕ ಪದವಿ ಕಾಲೇಜಿನ ಪ್ರಥಮ ವರ್ಷದ ಬಿಎ ತರಗತಿಯ ವಿದ್ಯಾರ್ಥಿಯ ಅಂಕಪಟ್ಟಿಯಲ್ಲಿ ಸಲ್ಮಾನ್ ಖಾನ್ ಫೊಟೊ ಮುದ್ರಿತಗೊಂಡಿದೆ.

ಈ ಮಧ್ಯೆ ಮತ್ತೊಂದು ಅಂಕಪಟ್ಟಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಫೋಟೊ ಮುದ್ರಣವಾಗಿದೆ ಎಂದು ವಿಶ್ವವಿದ್ಯಾಲಯದ ಮೂಲಗಳು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಂಕಪಟ್ಟಿಯನ್ನು ಮುದ್ರಿಸುವ ಖಾಸಗಿ ಸಂಸ್ಥೆಗಳ ಪ್ರಮಾದದಿಂದಾಗಿ ಹೀಗಾಗುತ್ತವೆ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಎರಡು ವಾರ ಬಾಕಿ ಇರುವಾಗಲೇ ಈ ಘಟನೆ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT