ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಭದ್ರತೆ ಕುರಿತ ಅರ್ಜಿ ವಜಾ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ : ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಎಸ್‌ಪಿಜಿಯ (ವಿಶೇಷ ಭದ್ರತಾ ಪಡೆ) ಭದ್ರತೆಯನ್ನು ನಿರಾಕರಿಸುವ ಮೂಲಕ ತಮ್ಮನ್ನು ತಾವು ಅಪಾಯಕ್ಕೆ ಒಡ್ಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

ಮುಖ್ಯನ್ಯಾಯಮೂರ್ತಿ ಗೀತಾ ಮಿತ್ತಲ್‌ ಮತ್ತು ನ್ಯಾಯಮೂರ್ತಿ ಸಿ.ಹರಿಶಂಕರ್‌ ಅವರು ಬುಧವಾರ ಅರ್ಜಿಯ ವಿಚಾರಣೆ ನಡೆಸಿತು.

‘ರಾಹುಲ್‌ ಗಾಂಧಿ ವಿರುದ್ಧದ ಅರ್ಜಿ ಸಮರ್ಥನೀಯವಲ್ಲ. ಭದ್ರತೆ ಕುರಿತ ಅರ್ಜಿ ವಿಚಾರಣೆಗೆ ಇದು ಸೂಕ್ತ ವೇದಿಕೆ ಅಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಎಸ್‌ಪಿಜಿ ಕಾಯ್ದೆಯನ್ನು ಉಲ್ಲಂಘಿಸಿದಂತೆ ರಾಹುಲ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಮುಂಬೈನ ಬಿಜೆಪಿ ವಕ್ತಾರ ತುಹಿನ್‌ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT