ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದುಬಾರಿ ಬಿಲ್‌: ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಲಿ’

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ : ಡೆಂಗಿ ಚಿಕಿತ್ಸೆಗೆ ದುಬಾರಿ ಬಿಲ್‌ ವಿಧಿಸಿರುವ ಗುರುಗ್ರಾಮದ ಫೋರ್ಟಿಸ್‌ ಆಸ್ಪತ್ರೆ ವಿರುದ್ಧ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಸಲಹೆ ನೀಡಿದ್ದಾರೆ.

ಡೆಂಗಿಯಿಂದ ಬಳಲುತ್ತಿದ್ದ 7 ವರ್ಷದ ಬಾಲಕಿಗೆ 15 ದಿನಚಿಕಿತ್ಸೆ ನೀಡಿದ್ದಕ್ಕಾಗಿ ₹16 ಲಕ್ಷ ವಿಧಿಸಿತ್ತು. ಬಾಲಕಿಯು ಬದುಕುಳಿಯಲಿಲ್ಲ. ಇದರಿಂದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಸ್ವಾನ್‌ ಅವರು, ‘ಬಾಲಕಿಯ ಪೋಷಕರು ಗ್ರಾಹಕರ ವೇದಿಕೆಯ ಮೊರೆ ಹೋಗಬೇಕು. ಪೋಷಕರಿಗೆ ಪರಿಹಾರ ದೊರೆಯಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT