ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಯು ನೌಕರರ ವೇತನ ಪರಿಷ್ಕರಣೆಗೆ ಸಮ್ಮತಿ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ 320 ಉದ್ಯಮಗಳ (ಪಿಎಸ್‌ಯು) ನೌಕರರ ವೇತನ ಪರಿಷ್ಕರಣೆಗೆ ಸಂಪುಟ ಸಮ್ಮತಿ ದೊರೆತಿದೆ.

ಪ್ರಧಾನಿ ನರೆಂದ್ರ ಮೋದಿ ನೇತೃತ್ವಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆ ವೇತನ ನೀತಿಗೆ ಅನುಮೋದನೆ ನೀಡಿದ್ದು, 9.35 ಲಕ್ಷ ಸಂಘಟಿತ ನೌಕರರು ಇದರ ಲಾಭ ಪಡೆಯಲಿದ್ದಾರೆ.

ಸರ್ಕಾರಿ ಸ್ವಾಮ್ಯದ ಉದ್ಯಮಗಳ ಪುನಶ್ಚೇತನ ಅಥವಾ ಪುನರ್‌ ರಚನೆ ಯೋಜನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಅದಕ್ಕೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನೌಕರರರೊಂದಿಗೆ ವೇತನ ಪರಿಷ್ಕರಣೆ ಮಾತುಕತೆ ನಡೆಸಲು ಉದ್ಯಮಗಳ ಆಡಳಿತ ಮಂಡಳಿಗಳಿಗೆ ಸಂಪೂರ್ಣ ಅಧಿಕಾರ ಮತ್ತು ಸ್ವಾತಂತ್ರ್ಯ ನೀಡಲು ಸಂಪುಟ ಸಭೆ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT