ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆ ಕಡ್ಡಾಯ: ಮಸೂದೆ ಮಂಡನೆ ಇಂದು

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಳಗಾವಿ: ‘ಜನಪ್ರತಿನಿಧಿಗಳ ಮತ್ತು ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಶಿಕ್ಷಣ ಪಡೆಯುವ ಸಂಬಂಧ ಗುರುವಾರ ಮಸೂದೆ ಮಂಡಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್‌ ತಿಳಿಸಿದರು.

ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಸಲ್ಲಿಸಿರುವ ವರದಿಯಲ್ಲಿ ಈ ಶಿಫಾರಸು ಇದೆ’ ಎಂದರು.

‘ಗ್ರಾಮ ಪಂಚಾಯಿತಿಯ ಡಿ ದರ್ಜೆ ನೌಕರರಿಂದ ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆಯವರೆಗಿನ ನೌಕರರು ಹಾಗೂ ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲು ಆರಂಭಿಸಿದರೆ ಸಮಾನ ಶಿಕ್ಷಣದ ಕನಸು ನನಸಾಗಲು ಸಾಧ್ಯ. ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಮತ್ತು ಮೂಲಸೌಕರ್ಯ ಸುಧಾರಣೆಯಾಗಲಿದೆ’ ಎಂದರು.

‘ವಿಧಾನ ಪರಿಷತ್‌ನಲ್ಲಿ ರಘು ಆಚಾರ್‌ ಮಂಡಿಸಲಿರುವ ಖಾಸಗಿ ಮಸೂದೆಗೆ ಈ ಮಸೂದೆ ಪೂರಕವಾಗಿರಲಿದೆ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT