ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು: ₹3,500 ದರ ನಿಗದಿಗೆ ಆಗ್ರಹ

Last Updated 22 ನವೆಂಬರ್ 2017, 19:43 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರ ಒಂದು ಟನ್ ಕಬ್ಬಿಗೆ ₹ 3,500 ದರ ನಿಗದಿಪಡಿಸಬೇಕು’ ಎಂದು ಕರ್ನಾಟಕ ಪ್ರದೇಶ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ಒತ್ತಾಯಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದು ಕೆ.ಜಿ ಸಕ್ಕರೆ ₹ 42ಕ್ಕೆ ಮಾರಾಟವಾಗುತ್ತಿದೆ. ಆದರೂ ಕಬ್ಬಿಗೆ ಸೂಕ್ತ ಬೆಲೆ ನೀಡದೆ ರಾಜ್ಯ ಸರ್ಕಾರ ಕಾರ್ಖಾನೆ ಮಾಲೀಕರ ಹಿತಕಾಯುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ’ ಎಂದು ಆರೋಪಿಸಿದರು.

‘ಕಬ್ಬಿಗೆ ಬೆಲೆ ನಿಗದಿಗೊಳಿಸಲು ರಾಜ್ಯ ಸರ್ಕಾರ ರೈತ ಪ್ರತಿನಿಧಿಗಳನ್ನೊಳಗೊಂಡ ಕಬ್ಬು ನಿಯಂತ್ರಣ ಮಂಡಳಿ ರಚಿಸಿದೆ. ಈ ಮಂಡಳಿಯಿಂದ ಕಬ್ಬು ಬೆಳೆಗಾರರಿಗೆ ಯಾವುದೇ ಅನುಕೂಲವಾಗಿಲ್ಲ. ಮಂಡಳಿಯಲ್ಲಿನ ರೈತ ಪ್ರತಿನಿಧಿಗಳು ಬೆಳೆಗಾರರ ಪರವಾಗಿಲ್ಲ. ಹಾಗಾಗಿ ಈ ಮಂಡಳಿಯನ್ನು ವಿಸರ್ಜಿಸಬೇಕು’ ಎಂದು ಒತ್ತಾಯಿಸಿದರು.

‘ಸಕ್ಕರೆ ಸಚಿವೆ ಎಂ.ಸಿ. ಮೋಹನಕುಮಾರಿ ಅವರಿಗೆ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆ ಬಗ್ಗೆ ಅರಿವಿಲ್ಲ. ಕೆಲ ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬಿಗೆ ₹ 3000 ನೀಡಲು ಸಿದ್ಧವಿದ್ದರೂ ಸಚಿವರು ಸಭೆ ನಡೆಸಿ ₹ 2500ರಿಂದ ₹ 2700 ನಿಗದಿ ಮಾಡಿದ್ದಾರೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT