ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಪೊಲೀಸರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

Last Updated 22 ನವೆಂಬರ್ 2017, 19:47 IST
ಅಕ್ಷರ ಗಾತ್ರ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡುವ ಆಹಾರದ ಗುಣಮಟ್ಟ ಪರೀಕ್ಷೆ ಮಾಡಿ ತಿಂಗಳಿಗೊಮ್ಮೆ ವರದಿ ನೀಡಲು ಲೋಕಾಯುಕ್ತ ಪೊಲೀಸರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಸೂಚನೆ ನೀಡಿದ್ದಾರೆ.

ಲೋಕಾಯುಕ್ತರ ನಿರ್ದೇಶನದಂತೆ ಅಕ್ಟೋಬರ್‌ನಲ್ಲಿ 121 ಕ್ಯಾಂಟೀನ್‌ಗಳಿಗೆ ಪೊಲೀಸರು ಭೇಟಿ ನೀಡಿ, ಪ್ರತಿಯೊಂದು ಕ್ಯಾಂಟೀನ್‌ನ ಆಹಾರದ ಗುಣಮಟ್ಟದ ಬಗ್ಗೆ ಪ್ರತ್ಯೇಕ ವರದಿಗಳನ್ನು ನೀಡಿದ್ದಾರೆ.

‘ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಯೋಜನೆ ಇದಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ನಿರಂತರ ಮೇಲ್ವಿಚಾರಣೆ ಇರಬೇಕಾಗುತ್ತದೆ. ಅದರ ಜೊತೆಗೆ ಲೋಕಾಯುಕ್ತ ಪೊಲೀಸರೂ ಪರಿಶೀಲನೆ ನಡೆಸಿ ನನಗೆ ವರದಿ ಸಲ್ಲಿಸಲಿದ್ದಾರೆ’ ಎಂದು ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದರು.

‘ಕ್ಯಾಂಟೀನ್‌ಗಳಲ್ಲಿ ತೂಕದ ಯಂತ್ರ ಇಲ್ಲ ಎಂಬ ದೂರುಗಳು ಇವೆ. ಈ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT