ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಸಕಲ ಸೇವೆಗಳಿಗೆ ‘ಉಮಂಗ್‌’ ಆ್ಯಪ್‌

Last Updated 23 ನವೆಂಬರ್ 2017, 10:47 IST
ಅಕ್ಷರ ಗಾತ್ರ

ನವದೆಹಲಿ: ಸೈಬರ್‌ ಸ್ಪೇಸ್‌ ಜಾಗತಿಕ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಚಾಲನೆ ನೀಡಿದರು.

ತಂತ್ರಜ್ಞಾನದ ಮೂಲಕ ಜನರಿಗೆ ತಲುಪಿಸುವ ಸೇವೆಗಳನ್ನು ಉತ್ತಮಗೊಳಿಸುವಲ್ಲಿ ಡಿಜಿಟಲ್‌ ಇಂಡಿಯಾ ಜಗತ್ತಿನಲ್ಲೇ ಅತಿ ದೊಡ್ಡ ಯೋಜನೆಯಾಗಿದೆ ಎಂದ ಪ್ರಧಾನಿ ಮೋದಿ ‘ಉಮಂಗ್’ ಆ್ಯಪ್‌ ಬಿಡುಗಡೆ ಮಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 100ಕ್ಕೂ ಹೆಚ್ಚು ಸೇವೆಗಳನ್ನು ಉಮಂಗ್ (UMANG –Unified Mobile Application for New-age Governance) ಒಂದೇ ಆ್ಯಪ್‌ನಲ್ಲಿ ಪಡೆಯಬಹುದಾಗಿದೆ. ಭಾರತದಲ್ಲಿ ಮೊಬೈಲ್‌ ಆಡಳಿತ ಹಾಗೂ ಡಿಜಿಟಲ್‌ ಇಂಡಿಯಾ ಕಾರ್ಯಕ್ರಮ ಪ್ರಚುರ ಪಡಿಸುವ ಉದ್ದೇಶದೊಂದಿಗೆ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ರಾಷ್ಟ್ರೀಯ ಇ–ಆಡಳಿತ ವಿಭಾಗದಿಂದ ಈ ಹೊಸ ಆ್ಯಪ್‌ ಅಭಿವೃದ್ಧಿಯಾಗಿದೆ.

‘ಕಳೆದ ಎರಡು ದಶಕಗಳಲ್ಲಿ ಸೈಬರ್‌ ಸ್ಪೇಸ್‌ ಜಗತ್ತನ್ನು ಪರಿವರ್ತಿಸಿದೆ. ಐಒಟಿ(ಇಂಟರ್ನೆಟ್‌ ಆಫ್‌ ಥಿಂಗ್ಸ್) ಹಾಗೂ ಕೃತಕ ಬುದ್ಧಿಮತ್ತೆ(ಎಐ) ಬಳಕೆ ಸಾಮಾನ್ಯವಾಗಿದೆ. ಡಿಜಿಟಲ್‌ ತಂತ್ರಜ್ಞಾನ ಉನ್ನತಿಯು ಉದ್ಯಮ ಹಾಗೂ ಆರ್ಥಿಕತೆಯ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.

ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳೊಂದಿಗೆ ಭಾರತದಂತಹ ಅಭಿವೃದ್ಧಿ ಶೀಲ ರಾಷ್ಟ್ರಗಳು ಸ್ಪರ್ಧಿಸಲು ತಂತ್ರಜ್ಞಾನ ಸಾಧ್ಯವಾಗಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT