ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿಂಗ್ಯಾ ಜನರ ವಾಪಸಾತಿ ಪ್ರಕ್ರಿಯೆಗೆ ಚಾಲನೆ

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಯಾಂಗೂನ್‌: ರೋಹಿಂಗ್ಯಾ ನಿರಾಶ್ರಿತರನ್ನು ಹಿಂದಕ್ಕೆ ಕರೆತರುವ ಪ್ರಕ್ರಿಯೆಗೆ ಎರಡು ತಿಂಗಳಲ್ಲಿ ಚಾಲನೆ ನೀಡಲು ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ ಸರ್ಕಾರ ಒಪ್ಪಿಕೊಂಡಿವೆ. ನಿರಾಶ್ರಿತರ ಕುರಿತಂತೆ ಜಾಗತಿಕ ಮಟ್ಟದಲ್ಲಿ ಒತ್ತಡ ಹೆಚ್ಚಾಗಿದ್ದರಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಬಾಂಗ್ಲಾದೇಶ ತಿಳಿಸಿದೆ.

ಕಳೆದ ಆಗಸ್ಟ್‌ ತಿಂಗಳಿಂದ 6.20 ಲಕ್ಷ ಮಂದಿ ಬಾಂಗ್ಲಾದೇಶಕ್ಕೆ ವಲಸೆ ಹೋಗಿದ್ದಾರೆ. ಆದರೆ ಮ್ಯಾನ್ಮಾರ್‌ ಸೇನೆಯ ಈ ‌ನಡೆಯು ‘ಜನಾಂಗೀಯ ಶುದ್ಧೀಕರಣ’ ಎಂದು ಅಮೆರಿಕ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿತ್ತು.

ಮ್ಯಾನ್ಮಾರ್‌ನ ನಾಯಕಿ ಆಂಗ್‌ಸಾನ್‌ ಸೂಕಿ ಹಾಗೂ ಬಾಂಗ್ಲಾದೇಶದ ಸಚಿವ ಎ.ಎಚ್‌.ಮಹಮ್ಮೂದ್‌ ಅಲಿ ಜತೆಗೆ ಮಾತುಕತೆ ನಡೆಸಿದ ಬಳಿಕ ಈ ಒಪ್ಪಂದವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT