ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಭಾರಂಭದ ನಿರೀಕ್ಷೆಯಲ್ಲಿ ಕೇರಳ ಬ್ಲಾಸ್ಟರ್ಸ್‌

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಕೊಚ್ಚಿ: ಹಿಂದಿನ ಆವೃತ್ತಿಯಲ್ಲಿ ರನ್ನರ್ಸ್ ಅಪ್ ಆಗಿದ್ದ ಕೇರಳ ಬ್ಲಾಸ್ಟರ್ಸ್ ತಂಡ ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್‌ ಟೂರ್ನಿಯ ಎರಡನೇ ಪಂದ್ಯದಲ್ಲಿ ಶುಕ್ರವಾರ ಶುಭಾರಂಭದ ನಿರೀಕ್ಷೆಯಲ್ಲಿದೆ.

ಜವಾಹರ್‌ಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಕೇರಳ ತಂಡ ಜೆಮ್‌ಶೆಡ್‌ಪುರ ಎಫ್‌ಸಿ ಸವಾಲು ಎದುರಿಸಲಿದೆ.

ಹೋದ ವರ್ಷ ಕೇರಳ ತಂಡದ ಕೋಚ್ ಆಗಿದ್ದ ಸ್ಟೀವ್‌ ಕಾಪೆಲ್‌ ಈ ಬಾರಿ ಜೆಮ್‌ಶೆಡ್‌ಪುರ ತಂಡಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ. ಇದೇ ಕ್ರೀಡಾಂಗಣದಲ್ಲಿ ಕೇರಳ ತಂಡ ಹಿಂದಿನ ಆವೃತ್ತಿಯಲ್ಲಿ ಅಟ್ಲೆಟಿಕೊ ಡಿ ಕೋಲ್ಕತ್ತ ಎದುರು ಫೈನಲ್ ಪಂದ್ಯದಲ್ಲಿ ಸೋತಿತ್ತು. ಪೆನಾಲ್ಟಿ ಶೂಟೌಟ್‌ನಲ್ಲಿ ಕೇರಳ ಹಿನ್ನಡೆ ಕಂಡಿತ್ತು.

ನಾಲ್ಕನೇ ಆವೃತ್ತಿಯಲ್ಲಿ ಕೇರಳ ತಂಡ ಎರಡನೇ ಪಂದ್ಯ ಆಡುತ್ತಿದೆ. ಮೊದಲ ಪಂದ್ಯದಲ್ಲಿ ಅಟ್ಲೆಟಿಕೊ ಡಿ ಕೋಲ್ಕತ್ತ ಎದುರು ಗೋಲು ರಹಿತ ಡ್ರಾ ಮಾಡಿಕೊಂಡಿತ್ತು.‌

ಜೆಮ್‌ಶೆಡ್‌ಪುರ ತಂಡ ಕೂಡ ಗುವಾಹಟಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ನಾರ್ತ್‌ಈಸ್ಟ್ ಯುನೈಟೆಡ್ ಎಫ್‌ಸಿ ಎದುರು ಗೋಲು ರಹಿತ ಡ್ರಾ ಮಾಡಿಕೊಂಡಿತ್ತು.

ಪಂದ್ಯ ಆರಂಭ: ರಾತ್ರಿ 8ಕ್ಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT