ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ: ಪ್ರವೀಣ್ ತೊಗಾಡಿಯಾ

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಉಡುಪಿ: ಅಯೋಧ್ಯೆಯಲ್ಲಿ ಆದಷ್ಟು ಬೇಗ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದರು.

ಧರ್ಮ ಸಂಸತ್ ಸಮ್ಮೇಳನದಲ್ಲಿ ಭಾಗವಹಿಸಲು ಗುರುವಾರ ಉಡುಪಿಗೆ ಬಂದಿರುವ ಅವರು ಮಾಧ್ಯಮ ಪ್ರತಿ
ನಿಧಿಗಳೊಂದಿಗೆ  ಮಾತನಾಡಿ, ‘ಅಸ್ಪೃಶ್ಯತೆ ನಿವಾರಣೆ, ಗೋ ರಕ್ಷಣೆಗೆ ಕೇಂದ್ರದ ಕಾನೂನು ಹಾಗೂ ದೇವಸ್ಥಾನ ಮತ್ತು ಮಠಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ಬಗ್ಗೆ ಸಂತರು ಚರ್ಚೆ ಮಾಡಿ ಕಾರ್ಯ ಯೋಜನೆ ನೀಡುವರು. ಸಮಾಜಿಕ ಹಾಗೂ ಸಾಂಸ್ಕೃತಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡುವರು’ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಜಾತಿಯವರು ಸಹ ನಮ್ಮ ಸಹೋದರರಿದ್ದಂತೆ, ಅವರನ್ನು ನಮ್ಮಿಂದ ಬೇರೆ ಮಾಡಲು ಸಾಧ್ಯವಿಲ್ಲ. ಚುನಾವಣೆಗೂ ಧರ್ಮ ಸಂಸತ್‌ಗೂ ಯಾವುದೇ ಸಂಬಂಧ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಲು ಏನು ಮಾಡಬೇಕು ಎಂದು ಸಂತರು ಹೇಳುವರು. ಸರ್ಕಾರದ ಪಾತ್ರದ ಬಗ್ಗೆ ಇಲ್ಲಿ ಚರ್ಚೆ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT