ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ರಫ್ತಿಗೆ ನಿರ್ಬಂಧ

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಬೆಲೆ ಏರಿಕೆಗೆ ಕಡಿವಾಣ ಹಾಕಲು ಮತ್ತು ಪೂರೈಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ಈರುಳ್ಳಿಯ ರಫ್ತಿನ ಮೇಲೆ ಪ್ರತಿ ಟನ್‌ಗೆ ₹ 55,250ರಂತೆ ಕನಿಷ್ಠ ರಫ್ತು ಬೆಲೆ (ಎಂಇಪಿ) ವಿಧಿಸಿದೆ.

‘ಎಂಇಪಿ’ಗಿಂತ ಕಡಿಮೆ ಬೆಲೆಗೆ ಈರುಳ್ಳಿ ರಫ್ತು ಮಾಡುವಂತಿಲ್ಲ. ಇದರಿಂದ ಈರುಳ್ಳಿ ರಫ್ತಿಗೆ ಕಡಿವಾಣ ಹಾಕಲು ಸಾಧ್ಯವಾಗಲಿದೆ. 2015ರ ಡಿಸೆಂಬರ್‌ನಲ್ಲಿ ‘ಎಂಇಪಿ’ ರದ್ದುಪಡಿಸಲಾಗಿತ್ತು. ಪ್ರತಿ ಟನ್‌ಗೆ ₹ 55,250ರ ದರದಲ್ಲಿ ರಫ್ತು ಮಾಡಲಾಗುವುದು ಎಂದು ಖಾತರಿ ನೀಡುವವರಿಗೆ ಮಾತ್ರ ಈರುಳ್ಳಿ ರಫ್ತಿಗೆ ಅವಕಾಶ ನೀಡಲಾಗುವುದು ಎಂದು ವಿದೇಶ ವ್ಯಾಪಾರ ಮಹಾ ನಿರ್ದೇಶನಾಲಯ ತಿಳಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಈರುಳ್ಳಿ ರಫ್ತು ಮಾಡಲಾಗಿದೆ.  ಏಪ್ರಿಲ್‌ – ಜುಲೈ ತಿಂಗಳಲ್ಲಿ 12 ಲಕ್ಷ ಟನ್‌ಗಳಷ್ಟು ಈರುಳ್ಳಿ ರಫ್ತಾಗಿದೆ. ಇದು ಕಳೆದ ವರ್ಷಕ್ಕಿಂತ ಶೇ 56ರಷ್ಟು ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT