ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಸ್ಪತ್ರೆಗಳ ಶುಲ್ಕ ಮಿತಿ ಮೀರದಂತೆ ಸೂಚಿಸಿ’

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಶುಲ್ಕ ವಿಧಿಸುವಾಗ ನ್ಯಾಯಯುತವಾಗಿಯೇ ನಡೆದುಕೊಳ್ಳುವಂತೆ ಮತ್ತು ಚಿಕಿತ್ಸೆಗೆ ಸಂಬಂಧಿಸಿ ಪಾರದರ್ಶಕವಾಗಿರುವಂತೆ ನೋಡಿಕೊಳ್ಳಲು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಬೇಕು ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

‘ರಾಜ್ಯದ ಎಲ್ಲ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ ನಡೆಸಬೇಕು. ಶುಲ್ಕ ವಿಧಿಸುವ ವಿಚಾರದಲ್ಲಿ ನ್ಯಾಯಯುತವಾಗಿಯೇ ನಡೆದುಕೊಳ್ಳಬೇಕು, ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಅವರಿಗೆ ತಿಳಿಸಬೇಕು’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದಾನ್‌ ಅವರು ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಡೆಂಗಿಯಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಗುರುಗ್ರಾಮದ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟಿದ್ದಳು. ಆಕೆಯ ಚಿಕಿತ್ಸೆಗೆ ಆಸ್ಪತ್ರೆ ₹16 ಲಕ್ಷ ಶುಲ್ಕ ವಿಧಿಸಿತ್ತು. ಆಸ್ಪತ್ರೆಗಳಲ್ಲಿ ಮಿತಿಮೀರಿದ ಶುಲ್ಕ ವಿಧಿಸುತ್ತಿದ್ದಾರೆ ಎಂಬ ಚರ್ಚೆಗೆ ಇದು ಕಾರಣವಾಗಿತ್ತು.

ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಶುಲ್ಕ ಮತ್ತು ಚಿಕಿತ್ಸಾ ಶುಲ್ಕವನ್ನು ನಿಗದಿಪಡಿಸಲು ಕಾಯ್ದೆ ರೂಪಿಸಲು ಮುಂದಾದಾಗ ಕರ್ನಾಟಕ ಸರ್ಕಾರದ ವಿರುದ್ಧ ವೈದ್ಯರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿಯೇ ಕೇಂದ್ರ ಈ ಸಲಹೆ ನೀಡಿದೆ. ಕರ್ನಾಟಕ ಸರ್ಕಾರದ ಮಸೂದೆಯನ್ನು ಕೆಲವು ತಿದ್ದುಪಡಿಗಳೊಂದಿಗೆ ವಿಧಾನಸಭೆ ಅಂಗೀಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT