ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯರ ಪ್ರೋತ್ಸಾಹ ಧನ ಸ್ಥಗಿತ

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಳಗಾವಿ: ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಹಾಜರಾತಿ ಹೆಚ್ಚಿಸುವ ಸಲುವಾಗಿ ನೀಡುತ್ತಿದ್ದ ₹ 2 ಪ್ರೋತ್ಸಾಹಧನವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಾರಾ ಅನೂರಾಧ  ಶೂನ್ಯ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಪ್ರೋತ್ಸಾಹ ಧನದಿಂದ ಒಂದು ಮಗುವಿಗೆ ವರ್ಷಕ್ಕೆ ಗರಿಷ್ಠ ₹ 450 ಸಿಗುತ್ತಿತ್ತು. ಈ ಮೊತ್ತವನ್ನು ವರ್ಷಾಂತ್ಯದಲ್ಲಿ ನೀಡುತ್ತಿದ್ದುದರಿಂದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡಿದಂತೆ ಆಗುತ್ತಿರಲಿಲ್ಲ.’ ‘ಹಾಗಾಗಿ ಈ ಕಾರ್ಯಕ್ರಮವನ್ನು ಮುಂದುವರೆಸುತ್ತಿಲ್ಲ’ ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT