ಉಡುಪಿ

ಮಂದಿರ ನಿರ್ಮಾಣದ ನಿರ್ಣಯ ನಿರೀಕ್ಷೆ

ಮೂರು ದಿನಗಳ ಕಾಲ ನಡೆಯುವ ಧರ್ಮ ಸಂಸತ್‌ ಸಮ್ಮೇಳನ ಹಾಗೂ ಹಿಂದೂ ಸಮಾಜೋತ್ಸವಕ್ಕೆ ಉಡುಪಿ ಸಕಲ ರೀತಿಯಿಂದಲೂ ಸಜ್ಜಾಗಿದೆ.

ಉಡುಪಿಯಲ್ಲಿ ಧರ್ಮ ಸಂಸತ್ ಪ್ರಯುಕ್ತ ಸಿದ್ಧಪಡಿಸಲಾದ ಹಿಂದೂ ವೈಭವ ಪ್ರದರ್ಶಿನಿ ಉದ್ಘಾಟಿಸಲು ಗುರುವಾರ ಸಂಜೆ ಬಂದ ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಸ್ವಾಗತಿಸಿದ ಪರಿ.

ಉಡುಪಿ: ಮೂರು ದಿನಗಳ ಕಾಲ ನಡೆಯುವ ಧರ್ಮ ಸಂಸತ್‌ ಸಮ್ಮೇಳನ ಹಾಗೂ ಹಿಂದೂ ಸಮಾಜೋತ್ಸವಕ್ಕೆ ಉಡುಪಿ ಸಕಲ ರೀತಿಯಿಂದಲೂ ಸಜ್ಜಾಗಿದೆ. ಧರ್ಮ ರಕ್ಷಣೆ, ಜಾಗೃತಿ ಹಾಗೂ ಧರ್ಮದಲ್ಲಿರುವ ಹುಳುಕುಗಳನ್ನು ನಿವಾರಣೆ ಮಾಡುವ ಉದ್ದೇಶದಿಂದ ಮಹತ್ವದ ನಿರ್ಣಯ ಕೈಗೊಳ್ಳಲು ಒಂದೂವರೆ ಸಾವಿರಕ್ಕೂ ಅಧಿಕ ಸಂತರು ಉತ್ಸುಕರಾಗಿದ್ದಾರೆ.

ನಗರದ ರಾಯಲ್ ಗಾರ್ಡನ್‌ನಲ್ಲಿ ಸಿದ್ಧವಾಗಿರುವ ‘ನಾರಾಯಣ ಗುರು’ ಸಭಾ ಮಂದಿರದ ‘ಭರಣಯ್ಯ’ ಬೃಹತ್ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ವಿಧ್ಯುಕ್ತ ಚಾಲನೆ ನೀಡಲಾಗುತ್ತದೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಕಿರಿಯ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗುರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ ಭಾಗವತ್ ಅವರು ಉಪಸ್ಥಿತರಿರುವರು. ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಮಾರ್ಗದರ್ಶನ ನೀಡುವರು.

ಮಧ್ಯಾಹ್ನ 3.30ರಿಂದ ಸಭಾಗೋಷ್ಠಿ ನಡೆಯಲಿದ್ದು, ‘ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಮುಂದಿನ ದಾರಿ’, ‘ಗೋ ಸಂರಕ್ಷಣೆ ಮತ್ತು ಸಂವರ್ಧನೆ’ ವಿಷಯದ ಬಗ್ಗೆ ಸಂತರು ಚರ್ಚೆ ನಡೆಯಲಿದೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಈ ಸಭೆಗೆ ಭಾರಿ ಮಹತ್ವವಿದ್ದು ‘ರಾಮ ಮಂದಿರ ನಿರ್ಮಾಣದ’ ಘೋಷಣೆ ಹಾಗೂ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.

ಉಡುಪಿಯಲ್ಲಿ 1985ರಲ್ಲಿ ನಡೆದಿದ್ದ ಸಂಸತ್‌ನಲ್ಲಿ ರಾಮ ಮಂದಿರದ ಬೀಗ ತೆರೆಯಬೇಕು ಎಂಬ ನಿರ್ಣಯ ಮಾಡಲಾಗಿತ್ತು. ಅದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಮಂದಿರದ ಬೀಗ ತೆರೆದಿತ್ತು. ಮುಂದಿನ ಹೋರಾಟಕ್ಕೆ ಅದು ಚೈತನ್ಯ ತುಂಬಿದ್ದನ್ನು ಸ್ಮರಿಸಬಹುದು.

ಕೇಸರಿ ಉತ್ಸಾಹ: ಧರ್ಮ ಸಂಸತ್ ಹಾಗೂ ಹಿಂದೂ ಸಮಾಜೋತ್ಸ ವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಉಡುಪಿ, ಮಣಿಪಾಲ, ಮಲ್ಪೆಯಲ್ಲಿ ಕೇಸರಿ ಪತಾಕೆ ಹಾಗೂ ಭಗವಾಧ್ವಜ ಹಾರಾಟ ಗಮನ ಸೆಳೆಯುತ್ತಿದೆ. ಇಡೀ ನಗರ ಕೇಸರಿಮಯವಾಗಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸದಸ್ಯರು ಉತ್ಸಾಹ ದಿಂದಿದ್ದಾರೆ.  ಜನಸಾಮಾನ್ಯರೂ ಧರ್ಮ ಸಂಸತ್‌ ಬಗ್ಗೆ ವಿಶೇಷವಾಗಿ ಗಮನ ಹರಿಸುವಂತಹ ವಾತಾವರಣ ಇಲ್ಲಿ ನಿರ್ಮಾಣವಾಗಿದೆ.

ಸಂತರ ಸಮಾವೇಶಕ್ಕೆ 30 ಸಾವಿರ ಚದರ ಅಡಿಯ ಸಭಾಂಗಣ ನಿರ್ಮಾಣವಾಗಿದೆ. 150 ಮಂದಿ ಸಂತರು ಕುಳಿತುಕೊಳ್ಳಲು ಅವಕಾಶ ಇರುವಂತಹ ಬೃಹತ್ ವೇದಿಕೆಯೂ ಆಕರ್ಷವಾಗಿದೆ.ಕಾರ್ಯಕ್ರಮದ ಸ್ಥಳಕ್ಕೆ ಸಂತರನ್ನು ಕರೆತರಲು ಹಾಗೂ ವಾಪಸ್ ಕರೆದುಕೊಂಡು ಹೋಗಲು 100ಕ್ಕೂ ಅಧಿಕ ವಾಹನ ಬಳಸಿಕೊಳ್ಳಲಾಗುತ್ತಿದೆ.

ಅತಿ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ: ಪ್ರವೀಣ್ ತೊಗಾಡಿಯಾ
ಉಡುಪಿ: ಅಯೋಧ್ಯೆಯಲ್ಲಿ ಆದಷ್ಟು ಬೇಗ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದರು.

ಧರ್ಮ ಸಂಸತ್ ಸಮ್ಮೇಳನದಲ್ಲಿ ಭಾಗವಹಿಸಲು ಗುರುವಾರ ಉಡುಪಿಗೆ ಬಂದಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ  ಮಾತನಾಡಿ, ‘ಅಸ್ಪೃಶ್ಯತೆ ನಿವಾರಣೆ, ಗೋ ರಕ್ಷಣೆಗೆ ಕೇಂದ್ರದ ಕಾನೂನು ಹಾಗೂ ದೇವಸ್ಥಾನ ಮತ್ತು ಮಠಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ಬಗ್ಗೆ ಸಂತರು ಚರ್ಚೆ ಮಾಡಿ ಕಾರ್ಯ ಯೋಜನೆ ನೀಡುವರು. ಸಮಾಜಿಕ ಹಾಗೂ ಸಾಂಸ್ಕೃತಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡುವರು’ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಜಾತಿಯವರು ಸಹ ನಮ್ಮ ಸಹೋದರರಿದ್ದಂತೆ, ಅವರನ್ನು ನಮ್ಮಿಂದ ಬೇರೆ ಮಾಡಲು ಸಾಧ್ಯವಿಲ್ಲ. ಚುನಾವಣೆಗೂ ಧರ್ಮ ಸಂಸತ್‌ಗೂ ಯಾವುದೇ ಸಂಬಂಧ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಲು ಏನು ಮಾಡಬೇಕು ಎಂದು ಸಂತರು ಹೇಳುವರು. ಸರ್ಕಾರದ ಪಾತ್ರದ ಬಗ್ಗೆ ಇಲ್ಲಿ ಚರ್ಚೆ ಇಲ್ಲ’ ಎಂದರು.

 

Comments
ಈ ವಿಭಾಗದಿಂದ ಇನ್ನಷ್ಟು
ಎಲ್ಲೆಲ್ಲೂ ಸಂಭ್ರಮದ ವಾತಾವರಣ

ಉಡುಪಿ
ಎಲ್ಲೆಲ್ಲೂ ಸಂಭ್ರಮದ ವಾತಾವರಣ

17 Jan, 2018

ಉಡುಪಿ
ಮನಸ್ಸಿನ ವಿಕಾಸಕ್ಕೆ ಸಾಹಿತ್ಯ ಅಗತ್ಯ: ವೈದೇಹಿ

‘ಸಮಗ್ರ ವಿಶ್ವ ಸಾಹಿತ್ಯದ ಪರಿಚಯವೇ ‘ಕೃತಿ ಜಗತ್ತು’ ಪುಸ್ತಕದಲ್ಲಿದೆ. ದುರಂತ, ದುಃಖ, ಸಂತೋಷವೆಲ್ಲವನ್ನೂ ವಿಶ್ಲೇಷಿಸಿ, ವಿಮರ್ಶಿಸಿ, ಅರ್ಥೈಸಿರುವ ಒಟ್ಟು 26 ಲೇಖನಗಳನ್ನು ಒಳಗೊಂಡಿದೆ.

17 Jan, 2018

ಉಡುಪಿ
ಪರ್ಯಾಯ: ಸಿಂಗಾರಗೊಂಡ ಉಡುಪಿ

ಪರ್ಯಾಯದ ಸಂದರ್ಭದಲ್ಲಿ ನಗರವನ್ನು ಸ್ವಚ್ಛಗೊಳಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ಮೆರವಣಿಗೆ ಸಾಗಿ ಹೋದ ತಕ್ಷಣವೇ ರಸ್ತೆ ಸ್ವಚ್ಛ ಮಾಡಲು ಪೌರ ಕಾರ್ಮಿಕರನ್ನು ನಿಯೋಜಿಸಲಾಗಿದೆ. ...

17 Jan, 2018
ಪ್ರಶ್ನೆ ಕೇಳುವವರ ಮೇಲೆ ಐಟಿ, ಇಡಿ ದಾಳಿ

ಉಡುಪಿ
ಪ್ರಶ್ನೆ ಕೇಳುವವರ ಮೇಲೆ ಐಟಿ, ಇಡಿ ದಾಳಿ

16 Jan, 2018

ಉಡುಪಿ
ಹರಿದು ಬಂತು ಹೊರೆ ಕಾಣಿಕೆ

ಪಲಿಮಾರು ವಿದ್ಯಾಧೀಶ ಸ್ವಾಮೀಜಿ ಅವರ ದ್ವಿತೀಯ ಪರ್ಯಾ ಯದ ಅಂಗವಾಗಿ ವಿವಿಧ ಸಂಘಟನೆ, ಸಂಸ್ಥೆಗಳು, ಸ್ಥಳೀಯಾಡಳಿತ ಸಂಸ್ಥೆಗ ಳಿಂದ ಭಾರಿ ಪ್ರಮಾಣದ ಹೊರೆಕಾಣಿಕೆ ಸಂದಾಯವಾಗಿದೆ. ...

16 Jan, 2018