ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಹತ್ತು ದಿನಗಳ ಹಿಂದೆ ರಾಜ್ಯಾದ್ಯಂತ 6,022 ಡೇಟಾಎಂಟ್ರಿ ಆಪರೇಟರ್ ಹುದ್ದೆಯನ್ನು ತಾಲ್ಲೂಕು ಪಂಚಾಯಿತಿ ಮೂಲಕ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಿದೆ. ಮೀಸಲಾತಿ ವರ್ಗೀಕರಣ ಮಾಡಿಲ್ಲ, ಎಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸುತ್ತಿಲ್ಲ. ಬರಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಅವರು ದೂರಿದರು.