ವಿಜಯಪುರ

ವಿಜಯಪುರದ ರಸ್ತೆ ಕಾಮಗಾರಿ ವೀಕ್ಷಣೆ, ಗುಣಮಟ್ಟ ಕಾಪಾಡಿ: ಅಮರನಾಥ

ಸಾರ್ವಜನಿಕ ಸ್ವತ್ತುಗಳನ್ನು ನಾಶ ಮಾಡುವುದಾಗಲಿ, ಅವುಗಳನ್ನು ಅತಿಕ್ರಮಣ ಮಾಡುವುದಾಗಲಿ ಆಗಬಾರದು ಎಂದರು. ರಸ್ತೆ ಮತ್ತಿತರ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು

ವಿಜಯಪುರದ ರಸ್ತೆ ಕಾಮಗಾರಿಯನ್ನು ಕೆ.ಜಿ.ಅಮರನಾಥ ಪರಿಶೀಲಿಸಿದರು

ವಿಜಯಪುರ: ಇಲ್ಲಿನ 10 ನೇ ವಾರ್ಡಿನ ಮಾಯಾ ಆಂಗ್ಲಶಾಲೆಯ ಮುಂಭಾಗದಲ್ಲಿ 14 ನೇ ಹಣಕಾಸು ಯೋಜನೆಯಡಿಯಲ್ಲಿ  ₹ 24 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ  ಕಾಮಗಾರಿಯನ್ನು ಪುರಸಭೆ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ ವೀಕ್ಷಿಸಿದರು. 14 ನೇ ಹಣಕಾಸು ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಸಾರ್ವಜನಿಕ ಸ್ವತ್ತುಗಳನ್ನು ನಾಶ ಮಾಡುವುದಾಗಲಿ, ಅವುಗಳನ್ನು ಅತಿಕ್ರಮಣ ಮಾಡುವುದಾಗಲಿ ಆಗಬಾರದು ಎಂದರು. ರಸ್ತೆ ಮತ್ತಿತರ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಮುಖಂಡ ಸಂಪತ್ ಕುಮಾರ್ ಮಾತನಾಡಿ, ಸ್ಥಳೀಯ ನಾಗರಿಕರು ರಸ್ತೆಗಳು, ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬೇಕು ಎಂದರು.ಇವುಗಳ ಕಡೆಗೆ ಹೆಚ್ಚು ಗಮನ ಹರಿಸಬೇಕು. ಎಲ್ಲೆಂದರಲ್ಲಿ ಕಸವನ್ನು ಹಾಕಬಾರದು ಎಂದು ಅವರು ಎಚ್ಚರಿಸಿದರು.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿ ನಡೆಯುವುದಾಗಿ ಸ್ಥಳೀಯ ನಾಗರಿಕರು ಗಮನಹರಿಸುವುದರ ಜೊತೆಗೆ ಸಂಬಂಧಪಟ್ಟ ಎಂಜಿನಿಯರ್‌ ಗಳು ಸ್ಥಳದಲ್ಲಿರಬೇಕು ಎಂದು ಎಚ್ಚರಿಸಿದರು. ಕಾಮಗಾರಿಗಳನ್ನು ವೀಕ್ಷಣೆ ಮಾಡಬೇಕು ಎಂದರು. ಗುತ್ತಿಗೆದಾರ ವೆಂಕಟೇಶ್ ಇದ್ದರು.

* * 

ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ನಾಗರಿಕರ ಸಹಕಾರವಿದ್ದಾಗ ಮಾತ್ರ ಉತ್ತಮ ಅಭಿವೃದ್ಧಿ ಸಾಧ್ಯವಾಗುತ್ತದೆ
ಕೆ.ಜಿ.ಅಮರನಾಥ , ಪುರಸಭೆ ಮುಖ್ಯಾಧಿಕಾರಿ

Comments
ಈ ವಿಭಾಗದಿಂದ ಇನ್ನಷ್ಟು
ಮುತ್ಯಾಲಮ್ಮ ಜಾತ್ರೆಯಲ್ಲಿ ಭಾಗವಹಿಸದಿರಲು ನಿರ್ಧಾರ

ದೊಡ್ಡಬಳ್ಳಾಪುರ
ಮುತ್ಯಾಲಮ್ಮ ಜಾತ್ರೆಯಲ್ಲಿ ಭಾಗವಹಿಸದಿರಲು ನಿರ್ಧಾರ

27 Mar, 2018
ಅನಾವರಣಗೊಂಡ ಸಾಂಸ್ಕೃತಿಕ ವೈವಿಧ್ಯ

ಆನೇಕಲ್‌
ಅನಾವರಣಗೊಂಡ ಸಾಂಸ್ಕೃತಿಕ ವೈವಿಧ್ಯ

27 Mar, 2018
ಅಭಿವೃದ್ಧಿಯಲ್ಲಿ ಹಿಂದುಳಿದ ವಿಜಯಪುರ

ವಿಜಯಪುರ
ಅಭಿವೃದ್ಧಿಯಲ್ಲಿ ಹಿಂದುಳಿದ ವಿಜಯಪುರ

27 Mar, 2018

ವಿಜಯಪುರ
ಕುಡಿಯುವ ನೀರಿನ ಘಟಕ ಸ್ಥಾಪಿಸಲು ಮನವಿ

ಪ್ರತಿ ವಾರ್ಡಿಗೊಂದರಂತೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು...

24 Mar, 2018
₹4.98 ಕೋಟಿ ವೆಚ್ಚದಲ್ಲಿ ನಗರಸಭೆ ಕಚೇರಿ

ದೊಡ್ಡಬಳ್ಳಾಪುರ
₹4.98 ಕೋಟಿ ವೆಚ್ಚದಲ್ಲಿ ನಗರಸಭೆ ಕಚೇರಿ

24 Mar, 2018