ಗೋಕಾಕ

ಬೆಳಗಾವಿ ಅಧಿವೇಶನ ಜಾತ್ರೆಯಿದ್ದಂತೆ

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳು ಹಾಗೂ ಮಂತ್ರಿಮಂಡಳದ ಸದಸ್ಯರುಗಳು ಹಾಗೂ ಅಧಿಕಾರಿಗಳು ಅದೇ ಗಾಂಭೀರ್ಯತೆಯಿಂದ ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು.

ಗೋಕಾಕ: ಉತ್ತರ ಕರ್ನಾಟಕ ಭಾಗದ ಜನತೆಯ ಆಶೋತ್ತರಗಳಿಗೆ ಪೂರಕವಾಗಿ ನಿರ್ಮಿಸಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಪ್ರತಿವರ್ಷ ನಡೆಯುತ್ತಿರುವ ವಿಧಾನಸಬೆ ಅಧಿವೇಶವನ ತನ್ನ ಸಾಫಲ್ಯತೆಯನ್ನು ಕಾಣುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅದು ವರ್ಷಕ್ಕೊಮ್ಮೆ ಪ್ರತಿ ಗ್ರಾಮಗಳಲ್ಲಿ ನಡೆಯುವ ಜಾತ್ರೆಗಳಂತಾಗಿದೆ ಎಂದು ಬಿ.ಜೆ.ಪಿ. ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ಭಾನುವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡುವ ಮೂಲಕ ತಮ್ಮ ಅನಿಸಿಕೆ ವ್ಯಕ್ತಪಡಿಸಿರುವ ಅವರು, ಸುವರ್ಣಸೌಧದಲ್ಲಿ ನಡೆಯುವ ವಿಧಾನಸಭೆ ಅಧಿವೇಶನ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಂತೆ ತನ್ನದೇ ಆದ ಗಾಂಭಿರ್ಯತೆಯನ್ನು ಹೊಂದಬೇಕು.

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳು ಹಾಗೂ ಮಂತ್ರಿಮಂಡಳದ ಸದಸ್ಯರುಗಳು ಹಾಗೂ ಅಧಿಕಾರಿಗಳು ಅದೇ ಗಾಂಭೀರ್ಯತೆಯಿಂದ ಇದರಲ್ಲಿ ಪಾಲ್ಗೊಳ್ಳುವಂತಾಗಬೇಕು.

ಆದರೆ ಇತ್ತಿಚೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಬಹುತೇಕ ಶಾಸಕರುಗಳ ಅನುಪಸ್ಥಿತಿ ಎದ್ದುಕಾಣುತ್ತಿದೆ. ಹತ್ತು ದಿನಗಳ ಅಧಿವೇಶನದಲ್ಲಿ ಜಾತ್ರೆಗಳ ರೀತಿಯಲ್ಲಿ ಊಟ ತಯಾರಿಸುವುದು ಮತ್ತು ಸಾಮೂಹಿಕ ಊಟ ಬಡಿಸುವುದನ್ನು ನೋಡಿದರೆ ಇದು ಜಾತ್ರೆಯೆನೋ ಎಂಬ ಅನುಮಾನ ಮೂಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಬೆಳಗಾವಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಗಂಭೀರವಾದ ಚರ್ಚೆ ನಡೆಯಬಹುದೆಂದು ಜನಸಾಮಾನ್ಯರ ಊಹೆಯಾಗಿತ್ತು. ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರುಗಳೇ ಭಾಗವಹಿಸದಿದ್ದರೆ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಚಿಸುವುದಾದರೂ ಹೇಗೆ ? ಎಂದು ಪ್ರಶ್ನಿಸಿರುವ ಅವರು, ಮುಂದಿನ ದಿನಗಳಲ್ಲಾದರೂ ಉತ್ತರ ಕರ್ನಾಟಕ ಭಾಗದ ಶಾಸಕರುಗಳು ಈ ಕುರಿತು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು

ಬೆಳಗಾವಿ
ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ಕೊರತೆ

‘ಮುಂಬರುವ ವಿಧಾನಸಭೆ ಚುನಾವಣೆಗೆ ಸಿಬ್ಬಂದಿ ಕೊರತೆ ಕಂಡುಬಂದಿದ್ದು, ಎಲ್ಲ ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳು ತಮ್ಮ ವ್ಯಾಪ್ತಿಯ ನೌಕರರ ಬಗ್ಗೆ ತಕ್ಷಣವೇ ಮಾಹಿತಿ ಒದಗಿಸಬೇಕು’...

22 Mar, 2018

ರಾಮದುರ್ಗ
‘ಗೋವಾ ಸರ್ಕಾರದ ಮೊಂಡುತನ’

ಮಲಪ್ರಭಾ ನದಿ ಜಲಾನಯನ ಪ್ರದೇಶ ಕಡಿಮೆ ಇರುವುದು ಮತ್ತು ಈ ಪ್ರದೇಶದಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಮಳೆ ಬೀಳುತ್ತಿರುವುದರಿಂದ ಮಹ ದಾಯಿ ನದಿ ತಿರುವು...

22 Mar, 2018

ಬೆಳಗಾವಿ
ಸಹಕಾರ ಸಂಘಗಳಲ್ಲಿ ಪರಿಶಿಷ್ಟರ ನೋಂದಣಿ

ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸದಸ್ಯತ್ವ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ...

22 Mar, 2018
26ನೇ ವಯಸ್ಸಿನಲ್ಲೇ ಶಾಸಕನಾದೆ...

ಬೆಳಗಾವಿ
26ನೇ ವಯಸ್ಸಿನಲ್ಲೇ ಶಾಸಕನಾದೆ...

22 Mar, 2018
ಬೆಳಗಾವಿಯಲ್ಲಿ ಕಾರಿಗೆ ಬೆಂಕಿ: 6 ಜನ ಪ್ರಾಣಾಪಾಯದಿಂದ ಪಾರು

ಬೆಳಗಾವಿ
ಬೆಳಗಾವಿಯಲ್ಲಿ ಕಾರಿಗೆ ಬೆಂಕಿ: 6 ಜನ ಪ್ರಾಣಾಪಾಯದಿಂದ ಪಾರು

22 Mar, 2018