‘ಡಿ.ಕೆ.ಶಿವಕುಮಾರ್ ಜತೆಗಿನ ಮಾತುಕತೆ ಔಪಚಾರಿಕ’

ರಾಜಕೀಯ ಚರ್ಚೆ ಆಗಿಲ್ಲ: ಅನಿತಾ

'ಚನ್ನಪಟ್ಟಣದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ನಾನು ಹಾಗೂ ಡಿ.ಕೆ. ಶಿವಕುಮಾರ್ ಅಕ್ಕಪಕ್ಕ ಕುಳಿತಿದ್ದರಿಂದ ಸಹಜವಾಗಿ ಯೋಗಕ್ಷೇಮ ವಿಚಾರಿಸಿಕೊಂಡೆವು. ಆದರೆ, ಅಲ್ಲಿ ಯಾವುದೆ ರಾಜಕೀಯದ ಮಾತುಕತೆ ಆಗಿಲ್ಲ.‌ ಮಾಧ್ಯಮಗಳು ಇದನ್ನೇ ಬಳಸಿಕೊಂಡು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಎಂದೆಲ್ಲ ಸುದ್ದಿ ಹಬ್ಬಿಸುವುದು ಬೇಡ’ –ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ.

ರಾಜಕೀಯ ಚರ್ಚೆ ಆಗಿಲ್ಲ: ಅನಿತಾ

ರಾಮನಗರ: ನನ್ನ ಮತ್ತು ಸಚಿವ ಡಿ.ಕೆ. ಶಿವಕುಮಾರ್ ನಡುವಿನ ಮಾತುಕತೆ ಕೇವಲ ಔಪಚಾರಿಕವಾಗಿದ್ದು, ಮಾಧ್ಯಮಗಳು ಅದಕ್ಕೆ ವಿಶೇಷ ಅರ್ಥ ಕಲ್ಪಿಸಬಾರದು ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ದೇವಸ್ಥಾನದ ಉದ್ಘಾಟನೆ ಸಂದರ್ಭ ಅವರು ಪತ್ರಕರ್ತರ ಜತೆ ಮಾತನಾಡಿದರು.

'ಚನ್ನಪಟ್ಟಣದಲ್ಲಿ ಶನಿವಾರ ನಡೆದ ಕನಕ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ನಾನು ಹಾಗೂ ಶಿವಕುಮಾರ್ ಅಕ್ಕಪಕ್ಕ ಕುಳಿತಿದ್ದರಿಂದ ಸಹಜವಾಗಿ ಯೋಗಕ್ಷೇಮ ವಿಚಾರಿಸಿಕೊಂಡೆವು. ಆದರೆ, ಅಲ್ಲಿ ಯಾವುದೆ ರಾಜಕೀಯದ ಮಾತುಕತೆ ಆಗಿಲ್ಲ.‌ ಮಾಧ್ಯಮಗಳು ಇದನ್ನೇ ಬಳಸಿಕೊಂಡು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಎಂದೆಲ್ಲ ಸುದ್ದಿ ಹಬ್ಬಿಸುವುದು ಬೇಡ.‌ ಸದ್ಯ ಅಂತಹ ಯಾವುದೆ ಪ್ರಸ್ತಾವ ಇಲ್ಲ’ ಎಂದರು.

'ಈ ಹಿಂದೆ ನಾನು ಶಾಸಕಿಯಾಗಿದ್ದಾಗ ವಿಧಾನಸೌಧದಲ್ಲಿ ಮುಖಾಮುಖಿ ಆದ ಸಂದರ್ಭಗಳಲ್ಲಿ ಇಬ್ಬರು ಪರಸ್ಪರ ಮಾತನಾಡಿದ್ದೇವೆ. ಅದರಲ್ಲಿ ಯಾವ ವಿಶೇಷವೂ ಇಲ್ಲ' ಎಂದರು.

ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಕುರಿತು ವರಿಷ್ಠರು ನಿರ್ಧರಿಸಲಿದ್ದಾರೆ. ಅದಕ್ಕಿನ್ನು ಕಾಲಾವಕಾಶ ಇದೆ ಎಂದು ಅವರು ಪ್ರತಿಕ್ರಿಯಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ  ದರದಲ್ಲಿ ಔಷಧಿ’

ಚನ್ನಪಟ್ಟಣ
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಔಷಧಿ’

19 Jan, 2018

ರಾಮನಗರ
ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ನೂತನ ಪಿಂಚಣಿ ಯೋಜನೆಯು ನೌಕರರಿಗೆ ಮಾರಕವಾಗಿದೆ. ಈ ಯೋಜನೆಗೆ ಒಳಪಡುವ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆಯ ಶೇ 10ರಷ್ಟು ನೌಕರರ ವೇತನದಲ್ಲಿ ಮುರಿದುಕೊಳ್ಳಲಾಗುತ್ತದೆ. ...

19 Jan, 2018
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

ಮನೆಯಿಂದ ಹೊರ ಬರದಂತೆ ಜನರಿಗೆ ಎಚ್ಚರಿಕೆ
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

18 Jan, 2018
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

ದನ ಮೇಯಿಸುತ್ತಿದ್ದ ವೇಳೆ ಕೊಂದಿದೆ
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

18 Jan, 2018
‘ರಾಜಕೀಯ ಪಕ್ಷಗಳಿಂದ ಸಂವಿಧಾನ ಕಡೆಗಣನೆ’

ಕನಕಪುರ
‘ರಾಜಕೀಯ ಪಕ್ಷಗಳಿಂದ ಸಂವಿಧಾನ ಕಡೆಗಣನೆ’

18 Jan, 2018