ಬೆಳಗಾವಿ

ಜಾರ್ಜ್‌, ವಿನಯ್‌ ರಾಜೀನಾಮೆಗೆ ಆಗ್ರಹ

‘ಎರಡೂ ಪ್ರಕರಣದಲ್ಲಿ ಸರ್ಕಾರ ಹಾಗೂ ಕಾಂಗ್ರೆಸ್‌ ಪಕ್ಷ ಸಚಿವರ ಬೆನ್ನಿಗೆ ನಿಂತಿವೆ. ಸರ್ಕಾರದಿಂದ ತಮಗೆ ರಕ್ಷಣೆ ದೊರೆಯುತ್ತದೆ ಎನ್ನುವ ಭರವಸೆಯನ್ನು ಜನಸಾಮಾನ್ಯರು ಕಳೆದುಕೊಂಡಿದ್ದಾರೆ.

ಬೆಳಗಾವಿ: ಸಚಿವರಾದ ಕೆ.ಜೆ. ಜಾರ್ಜ್‌ ಹಾಗೂ ವಿನಯ ಕುಲಕರ್ಣಿ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಬಿಜೆಪಿ ನಗರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್‌ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಸಿಬಿಐ ತನಿಖೆಯೂ ನಡೆಯುತ್ತಿದೆ. ಆದರೂ ಅವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದು ದುರದೃಷ್ಟಕರ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ ಅವರ ಕೈವಾಡವಿದೆ’ ಎಂದು ದೂರಿದರು.

‘ಎರಡೂ ಪ್ರಕರಣದಲ್ಲಿ ಸರ್ಕಾರ ಹಾಗೂ ಕಾಂಗ್ರೆಸ್‌ ಪಕ್ಷ ಸಚಿವರ ಬೆನ್ನಿಗೆ ನಿಂತಿವೆ. ಸರ್ಕಾರದಿಂದ ತಮಗೆ ರಕ್ಷಣೆ ದೊರೆಯುತ್ತದೆ ಎನ್ನುವ ಭರವಸೆಯನ್ನು ಜನಸಾಮಾನ್ಯರು ಕಳೆದುಕೊಂಡಿದ್ದಾರೆ.

ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಆರೋಪಿ ಸ್ಥಾನದಲ್ಲಿರುವ ಸಚಿವರು ಅವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು’ ಎಂದು ಕೋರಿ ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಗರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟೋಪಣ್ಣವರ, ಪ್ರಧಾನ ಕಾರ್ಯದರ್ಶಿ ಶಶಿಕಾಂತ ಪಾಟೀಲ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಬೆಳಗಾವಿ
ನನ್ನ ಮತ ಖಾತ್ರಿ- ಯುವಜನರಿಂದ ಸಹಿ

ಭಯವಿಲ್ಲದೇ, ಧರ್ಮ, ಜಾತಿ, ಸಮುದಾಯ, ಭಾಷೆ ಅಥವಾ ಯಾವುದೇ ಪ್ರಭಾವಕ್ಕೆ ಒಳಗಾಗದೇ ಮುಕ್ತವಾಗಿ ನಮ್ಮ ಮತ ಚಲಾಯಿಸುತ್ತೇವೆ.

25 Apr, 2018

ಬೆಳಗಾವಿ
ರಾಜ್‌ಕುಮಾರ್‌ ಜಾಗತಿಕ ಶ್ರೇಷ್ಠ ಕಲಾವಿದ

‘ವರನಟ ರಾಜ್‌ಕುಮಾರ್‌ ಅವರು ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲದ ಜಾಗತಿಕ ಮಟ್ಟದ ಶ್ರೇಷ್ಠ ಕಲಾವಿದರಾಗಿದ್ದಾರೆ’ ಎಂದು ಹಿರಿಯ ಸಾಹಿತಿ ಬಸವರಾಜ ಜಗಜಂಪಿ ಹೇಳಿದರು.

25 Apr, 2018
ಕಡೋಲಿ: ಲಕ್ಷ್ಮೀದೇವಿ ಜಾತ್ರೆ ಆರಂಭ

ಬೆಳಗಾವಿ
ಕಡೋಲಿ: ಲಕ್ಷ್ಮೀದೇವಿ ಜಾತ್ರೆ ಆರಂಭ

25 Apr, 2018
ಕಿತ್ತೂರು: ಜೆಡಿಎಸ್‌ ಅಭ್ಯರ್ಥಿ ದಿಢೀರ್ ಬದಲು!

ಬೆಳಗಾವಿ
ಕಿತ್ತೂರು: ಜೆಡಿಎಸ್‌ ಅಭ್ಯರ್ಥಿ ದಿಢೀರ್ ಬದಲು!

25 Apr, 2018
‘ಬಂಡಾಯ ಅಭ್ಯರ್ಥಿಗಳಿಂದ ಏನೂ ಎಫೆಕ್ಟ್‌ ಆಗಲ್ಲ...’

ಬೆಳಗಾವಿ
‘ಬಂಡಾಯ ಅಭ್ಯರ್ಥಿಗಳಿಂದ ಏನೂ ಎಫೆಕ್ಟ್‌ ಆಗಲ್ಲ...’

24 Apr, 2018