ಕಾರ್ಕಳ

ಕಾಂಗ್ರೆಸ್ ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧ: ಬಾವ

‘ಯಾವುದೇ ಬೆಲೆ ತೆತ್ತಾದರೂ ಸರಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯ ಕರ್ತರು ಸಿದ್ಧರಾಗಿದ್ದಾರೆ’

ಕಾರ್ಕಳ: ‘ಯಾವುದೇ ಬೆಲೆ ತೆತ್ತಾದರೂ ಸರಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯ ಕರ್ತರು ಸಿದ್ಧರಾಗಿದ್ದಾರೆ’ ಎಂದು ಕೆಪಿಸಿಸಿ ಉಸ್ತುವಾರಿ ಉಡುಪಿ ಜಿಲ್ಲಾ ವೀಕ್ಷಕ ಜಿ.ಎ. ಬಾವ ಹೇಳಿದರು.

ತಾಲ್ಲೂಕಿನ ಹಿರ್ಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯ ಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳು ಜನರನ್ನು ತಲುಪಿವೆ. ಕ್ಷೇತ್ರದಲ್ಲಿ ಅಭ್ಯರ್ಥಿಯ ಬಗ್ಗೆ ಯಾವುದೇ ಗೊಂದಲವಿಲ್ಲ, ಹೈಕಮಾಂಡ್ ತನ್ನ ಸಾಂವಿಧಾನಿಕ ವ್ಯಾಪ್ತಿಯಲ್ಲಿ ಆಯ್ಕೆ ಮಾಡುವ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧರಾಗಿದ್ದಾರೆ ಎಂದರು.

ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕಾಂಗ್ರೆಸ್ ಸದಸ್ಯ ಶಿರಿಯಣ್ಣ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಗ್ರಾಮ ಅಧ್ಯಕ್ಷ ಚೇತನ್ ಶೆಟ್ಟಿ, ವಕ್ತಾರ ನಕ್ರೆ ಬಿಪಿನಚಂದ್ರ ಪಾಲ್, ಪಕ್ಷದ
ವಿವಿಧ ಘಟಕಗಳ ಅಧ್ಯಕ್ಷರು ಪಂಚಾಯಿತಿ ಸದಸ್ಯರು ಉಪಸ್ಥಿತ ರಿದ್ದರು. ಸಂತೋಷ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
‘ಮಾದರಿ ತಾಲ್ಲೂಕಾಗಿ ಬಾಗೇವಾಡಿ ಅಭಿವೃದ್ಧಿ’

ಬಸವನಬಾಗೇವಾಡಿ
‘ಮಾದರಿ ತಾಲ್ಲೂಕಾಗಿ ಬಾಗೇವಾಡಿ ಅಭಿವೃದ್ಧಿ’

21 Jan, 2018

ಬಸವನಬಾಗೇವಾಡಿ
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ

‘ತೊಗರಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದ ಸಂದರ್ಭದಲ್ಲಿ ಖರೀದಿಸಲು ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈಗಾಗಲೇ ನೋಂದಣಿ ಮಾಡಿಸಿದ ರೈತರು ತೊಗರಿ ಮಾರಾಟ ಮಾಡುವ ಮೂಲಕ...

21 Jan, 2018
ಹಾಲಾಡಿ– ರಾಕೇಶ್ ಮಲ್ಲಿ ನಡುವೆ ಪೈಪೋಟಿ!

ಉಡುಪಿ
ಹಾಲಾಡಿ– ರಾಕೇಶ್ ಮಲ್ಲಿ ನಡುವೆ ಪೈಪೋಟಿ!

21 Jan, 2018
ಪಾರ್ಕಿಂಗ್‌ ಸ್ಥಳದಲ್ಲಿದ್ದ ಅಂಗಡಿ ತೆರವು

ಉಡುಪಿ
ಪಾರ್ಕಿಂಗ್‌ ಸ್ಥಳದಲ್ಲಿದ್ದ ಅಂಗಡಿ ತೆರವು

20 Jan, 2018

ಉಡುಪಿ
ಕಾನೂನು ಉಲ್ಲಂಘಿಸುವ ಖಾಸಗಿ ಬಸ್ ವಿರುದ್ಧ ಕ್ರಮ

ಮಟ್ಕಾ ದಂಧೆಯ ಬಗ್ಗೆ ನಾಲ್ಕು ದೂರುಗಳು ಬಂದವು. ಮಟ್ಕಾ ದಂಧೆ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಪರ್ಯಾಯದಂತಹ ಕಾರ್ಯಕ್ರಮ ಇದ್ದರೂ ಕಳೆದ ವಾರ 13...

20 Jan, 2018